ಬಂಗಾರಪೇಟೆ: ಸರ್ಕಾರ ಅನುಷ್ಠಾನ ಮಾಡುವ ಎಲ್ಲ ಮೋಜಿನಿ ಯೋಜನೆಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಾ ಬಂದರೂ ಇಲ್ಲಿವರಗೆ ಸರ್ಕಾರಿ ಭೂಮಾಪಕರಿಗೆ ಸಿಗುವ ಸೌಲಭ್ಯ ನೀಡಿದೆ ತಾರತಮ್ಯ ಧೋರಣೆ ಅನುಸರಿಸಲಾಗುತ್ತಿದೆ ಎಂದು ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂಮಾಪಕರ ಸಂಘದ ತಾಲ್ಲೂಕು ಅಧ್ಯಕ್ಷ ಪಾಂಡುರಂಗಯ್ಯ ತಿಳಿಸಿದರು.

ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ ಭಾನುವಾರ ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂ ಮಾಪಕರ ತಾಲ್ಲೂಕು ಸಂಘದಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.

ಸುಮಾರು 25 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಾ ಬಂದರೂ ಇಲಾಖೆಯಿಂದ ಯಾವುದೇ ಸೌಲಭ್ಯ ಇಲ್ಲ. ಸರ್ಕಾರಿ ಭೂಮಾಪಕರಿಗೆ ಸಿಗುವ ಸೌಲಭ್ಯ ಪರವಾನಗಿ ಭೂಮಾಪಕರಿಗೆ ನೀಡಿದೆ ಸರ್ಕಾರ ಇಬ್ಬಗೆ ನೀತಿ ಅನುಸರಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸರ್ಕಾರದಿಂದ ಯಾವುದೇ ಸೌಲಭ್ಯ ಹಾಗೂ ಸಾಮಾಜಿಕ ಭದ್ರತೆ ಕಲ್ಪಿಸಿಲ್ಲ. ಇಲಾಖೆ ನೀಡುತ್ತಿರುವ ಸಂಭಾವಯಿಂದ ಜೀವನ ನಿರ್ವಹಣೆ ಸಾಧ್ಯವಾಗುತ್ತಿಲ್ಲ. ಸಮಾನ ಕೆಲಸಕ್ಕೆ ಸಮಾನ ವೇತನ ಅಥವಾ ಕೆಲಸ ಕಾಯಂಗೊಳಿಸಿ ಸರ್ಕಾರಿ ಭೂಮಾಪಕರನ್ನಾಗಿ ಮಾಡಬೇಕಾಗಿ ಶಾಸಕರಲ್ಲಿ ಮನವಿ ಮಾಡಿದರು.

ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂ ಮಾಪಕರ ಸಂಘದ ರವಿ ರಾಜು, ನಿತಿನ್ ಪ್ರಭಾಕರ್, ಅಜಯ್ ಕುಮಾರ್, ರಕ್ಷಿತ್ , ಸಂತೋಷ್ ಪಿ.ಎನ್, ವೆಂಕಟೇಶ್, ಪ್ರಸಾದ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.