ಕಾಮಗಾರಿ ಬಿಲ್ ಪಾವತಿಗೆ ಮನವಿ

ಸೋಮವಾರ, ಜೂನ್ 17, 2019
28 °C

ಕಾಮಗಾರಿ ಬಿಲ್ ಪಾವತಿಗೆ ಮನವಿ

Published:
Updated:

ಕೋಲಾರ: ಕಾಮಗಾರಿ ಪೂರ್ಣಗೊಂಡಿದ್ದರೂ ನಗರಸಭೆ ಎಂಜಿನಿಯರ್‌ಗಳು ಬಿಲ್ ಪಾವತಿಸದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರರು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಅವರಿಗೆ ಇತ್ತೀಚೆಗೆ ದೂರು ಸಲ್ಲಿಸಿದರು.

‘ನಗರದ ವಿವಿಧ ವಾರ್ಡ್‌ಗಳಲ್ಲಿ ಕಾಲಮಿತಿಯೊಳಗೆ ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳಿಸಿದ್ದೇವೆ. ಆದರೆ, ಅಧಿಕಾರಿಗಳು ಈವರೆಗೂ ಬಿಲ್ ಪಾವತಿ ಮಾಡಿಲ್ಲ’ ಎಂದು ಗುತ್ತಿಗೆದಾರರು ಆರೋಪಿಸಿದರು.

‘ನಗರದ ಮಣಿಘಟ್ಟ ರಸ್ತೆಯ ಕೊಳವೆ ಬಾವಿಯಿಂದ ವಿವಿಧ ವಾರ್ಡ್‌ಗಳಿಗೆ ನೀರು ಪೂರೈಸಲು ಪೈಪ್‌ಲೈನ್ ಕಾಮಗಾರಿ ನಡೆಸಿದ್ದೇವೆ. ಅಧಿಕಾರಿಗಳು ಈ ಕಾಮಗಾರಿಗೆ ₹ 8.10 ಲಕ್ಷ ವೆಚ್ಚದ ಅಂದಾಜು ಮಾಡಿ ಕಾರ್ಯಾದೇಶ ನೀಡಿದ್ದರು. ಕಾಮಗಾರಿ ಪೂರ್ಣಗೊಂಡ ನಂತರ ಹಂತ ಹಂತವಾಗಿ ಬಿಲ್ ಪಾವತಿಸುತ್ತೇವೆ ಎಂದು ಹೇಳಿದ್ದ ಅಧಿಕಾರಿಗಳು ಇದೀಗ ಹಣ ಕೊಡದೆ ಸತಾಯಿಸುತ್ತಿದ್ದಾರೆ’ ಎಂದು ಗುತ್ತಿಗೆದಾರ ಪಿ.ಶಾಂತಕುಮಾರ್ ದೂರಿದರು.

‘ಕಾಮಗಾರಿ ಪ್ರಗತಿಯಲ್ಲಿರುವಾಗ ಸಕಾಲಕ್ಕೆ ಬಿಲ್ ಪಾವತಿ ಮಾಡದಿದ್ದರೂ ಸಾರ್ವಜನಿಕರ ಹಿತದೃಷ್ಟಿಯಿಂದ ಸ್ವಂತ ಹಣದಲ್ಲಿ ಕೆಲಸ ಪೂರ್ಣಗೊಳಿಸಿದ್ದೇವೆ. ಬಡ್ಡಿ ಸಾಲ ತಂದು ಕಾಮಗಾರಿ ನಡೆಸಿದ್ದೇವೆ. ಅಧಿಕಾರಿಗಳು ಬಿಲ್‌ ಪಾವತಿಸಲು ಮೀನಮೇಷ ಎಣಿಸುತ್ತಿದ್ದು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದೇವೆ’ ಎಂದು ಗುತ್ತಿಗೆದಾರರು ಅಳಲು ತೋಡಿಕೊಂಡರು.

ಕಡತವಿಲ್ಲ: ಗುತ್ತಿಗೆದಾರರ ದೂರಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ, ‘ಕಾಮಗಾರಿಗೆ ಸಂಬಂಧಿಸಿದ ಕಡತಗಳನ್ನು ಶೀಘ್ರವೇ ಪರಿಶೀಲಿಸಿ ಬಿಲ್ ಪಾವತಿಸಿ’ ಎಂದು ಎಂಜಿನಿಯರ್‌ಗಳಿಗೆ ಆದೇಶಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕಿರಿಯ ಎಂಜಿನಿಯರ್ ಸುಧಾಕರ್‌ಶೆಟ್ಟಿ, ‘ನಗರಸಭೆಯ ಹಿಂದಿನ ಆಯುಕ್ತ ರಾಮಪ್ರಕಾಶ್ ಅವರು ಕಡತ ತೆಗೆದುಕೊಂಡಿದ್ದಾರೆ ಹೋಗಿದ್ದಾರೆ’ ಎಂದು ತಿಳಿಸಿದರು. ಇದರಿಂದ ಕೆಂಡಾಮಂಡಲರಾದ ಜಿಲ್ಲಾಧಿಕಾರಿ, ‘ಬೇರೆಡೆಗೆ ವರ್ಗಾವಣೆಯಾದ ಅವರು ಇಲ್ಲಿನ ಕಡತ ಏಕೆ ತೆಗೆದುಕೊಂಡು ಹೋಗಿದ್ದಾರೆ? ಅವರ ವಿರುದ್ಧ ಪ್ರಕರಣ ದಾಖಲಿಸಿ’ ಎಂದು ಸೂಚಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !