ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪನ್ಮೂಲ ಕೇಂದ್ರ ಶೀಘ್ರ ಉದ್ಘಾಟನೆ: ಜಿ.ಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್

Last Updated 2 ಮಾರ್ಚ್ 2021, 15:54 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲಾ ಪಂಚಾಯಿತಿ ಸಂಪನ್ಮೂಲ ಕೇಂದ್ರದ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಸದ್ಯದಲ್ಲೇ ಕಟ್ಟಡದ ಉದ್ಘಾಟನಾ ದಿನಾಂಕ ನಿಗದಿಪಡಿಸುತ್ತೇವೆ’ ಎಂದು ಜಿ.ಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ತಿಳಿಸಿದರು.

ಮಂಗಳವಾರ ಜಿ.ಪಂ ಸಂಪನ್ಮೂಲ ಕೇಂದ್ರದ ಕಾಮಗಾರಿ ಪರಿಶೀಲಿಸಿ ಮಾತನಾಡಿ, ‘ಕಟ್ಟಡದ ಸಣ್ಣಪುಟ್ಟ ಕೆಲಸ ಬಾಕಿಯಿದ್ದು, ಮೂರ್ನಾಲ್ಕು ದಿನದಲ್ಲಿ ಪೂರ್ಣಗೊಳ್ಳಲಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕಟ್ಟಡ ಉದ್ಘಾಟಿಸುತ್ತಾರೆ’ ಎಂದು ಹೇಳಿದರು.

‘ಜಿ.ಪಂ ಹಾಗೂ ತಾ.ಪಂ ಸದಸ್ಯರಿಗೆ ತರಬೇತಿ ನೀಡಲು ಮತ್ತು ಜಿ.ಪಂನ ಇತರ ಕಾರ್ಯ ಚಟುವಟಿಕೆಗಳಿಗಾಗಿ ಸಂಪನ್ಮೂಲಕ ಕೇಂದ್ರ ನಿರ್ಮಿಸಲಾಗಿದೆ. ಭೂಸೇನಾ ನಿಗಮವು ಸುಮಾರು ₹ 2.10 ಕೋಟಿ ವೆಚ್ಚದಲ್ಲಿ ಕೇಂದ್ರದ ಕಾಮಗಾರಿ ನಡೆಸಿದೆ’ ಎಂದು ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್‌.ಎಂ.ನಾಗರಾಜ್‌ ಮಾಹಿತಿ ನೀಡಿದರು.

‘ಕೇಂದ್ರದ ತರಬೇತಿ ಸಭಾಂಗಣ, ಗ್ರಂಥಾಲಯ ಹಾಗೂ ಶೌಚಾಲಯ ಕಾಮಗಾರಿಯಲ್ಲಿ ಕೆಲ ಲೋಪದೋಷ ಕಂಡುಬಂದಿದ್ದು, ಅದನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ವಿವರಿಸಿದರು.

ಭೂಸೇನಾ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್‌ ರವಿಶಂಕರ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT