ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ಸಮಸ್ಯೆಗೆ ಸ್ಪಂದನೆ

Last Updated 2 ಫೆಬ್ರುವರಿ 2021, 16:22 IST
ಅಕ್ಷರ ಗಾತ್ರ

ಕೋಲಾರ: ‘ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸಂಘಟನೆ ಬಲಗೊಳಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ’ ಎಂದು ರಾಜ್ಯ ದೈಹಿಕ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ಎಸ್.ಚೌಡಪ್ಪ ಭರವಸೆ ನೀಡಿದರು.

ತಾಲ್ಲೂಕಿನ ಕ್ಯಾಲನೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ‘ಸಾಕಷ್ಟು ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಇದರಿಂದ ಮಕ್ಕಳಲ್ಲಿ ಶಿಸ್ತು, ಸಂಸ್ಕಾರ ಕಲಿಸಲು ಅಡ್ಡಿಯಾಗಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದಲೂ ದೈಹಿಕ ಶಿಕ್ಷಣ ಅತ್ಯಗತ್ಯ’ ಎಂದರು.

‘ಖಾಸಗಿ ಶಾಲೆಗಳ ಪೈಪೋಟಿ ಎದುರಿಸಿ ಸರ್ಕಾರಿ ಶಾಲೆಗಳನ್ನು ಉಳಿಸುವ ಹೊಣೆ ಶಿಕ್ಷಕರ ಮೇಲಿದೆ. ಸರ್ಕಾರಿ ಶಾಲೆಗಳು ಮುಚ್ಚಿದರೆ ಸಮಾನ ಶಿಕ್ಷಣಕ್ಕೆ ಹೊಡೆತ ಬೀಳುತ್ತದೆ ಎಂಬುದನ್ನು ಮರೆಯಬಾರದು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಆದರೆ, ಪೋಷಕರಲ್ಲಿನ ಖಾಸಗಿ ಶಾಲೆ ವ್ಯಾಮೋಹ ದೂರ ಮಾಡುವ ರೀತಿಯಲ್ಲಿ ಶಿಕ್ಷಕರು ನಂಬಿಕೆ ಗಳಿಸಬೇಕು’ ಎಂದು ಸಲಹೆ ನೀಡಿದರು.

‘ಕೋವಿಡ್ ಸಂಕಷ್ಟದಲ್ಲಿ ಸರ್ಕಾರಿ ಶಾಲೆಗಳ ಮಕ್ಕಳ ದಾಖಲಾತಿ ಉತ್ತಮವಾಗಿದೆ. ಇದೀಗ ಶಾಲೆಗಳು ಆರಂಭವಾಗಿದ್ದು, ಅಲ್ಪ ಸಮಯದಲ್ಲೇ ಮಕ್ಕಳ ಕಲಿಕೆಗೆ ನೆರವಾಗಬೇಕಾಗಿದೆ. ಶಾಲೆಗಳಲ್ಲಿ ಕೋವಿಡ್‌ ಸುರಕ್ಷತಾ ಮಾರ್ಗಸೂಚಿ ಪಾಲನೆಗೆ ಒತ್ತು ಕೊಡಿ’ ಎಂದು ತಿಳಿಸಿದರು.

‘ಚೌಡಪ್ಪ ಅವರು ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿಯೂ ಶಿಕ್ಷಕರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ. ಇದೀಗ ಅವರು ರಾಜ್ಯ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತಸ ತಂದಿದೆ’ ಎಂದು ಮುಖ್ಯ ಶಿಕ್ಷಕ ಮಲ್ಲಿಕಾರ್ಜುನ್ ಹೇಳಿದರು.

ಶಾಲೆಯ ಶಿಕ್ಷಕರಾದ ಶಿವಕುಮಾರ್, ನಾರಾಯಣರೆಡ್ಡಿ, ರಾಮಲಿಂಗಪ್ಪ, ಸಿ.ವಿ.ಶ್ರೀನಾಥ್, ಜೋಷಿ, ಶಿವಪ್ಪ, ರಾಮಾಂಜಪ್ಪ, ರಾಧಾ, ಜ್ಯೋತಿ, ಸೌಮ್ಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT