ಮಂಗಳವಾರ, ಸೆಪ್ಟೆಂಬರ್ 28, 2021
20 °C

ಶಿಕ್ಷಕರ ಸಮಸ್ಯೆಗೆ ಸ್ಪಂದನೆ: ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಜಿಲ್ಲೆಯ ಶಿಕ್ಷಕರ ಬೇಡಿಕೆ ಹಾಗೂ ಕುಂದು ಕೊರತೆಗಳ ಬಗ್ಗೆ ಚರ್ಚಿಸಿದ್ದು, ಸಮಸ್ಯೆಗಳ ನಿವಾರಣೆಗೆ ಸ್ಪಂದಿಸುತ್ತೇನೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್‌.ಜಿ.ನಾಗೇಶ್‌ ಭರವಸೆ ನೀಡಿದರು.

ಇಲ್ಲಿ ಶುಕ್ರವಾರ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರಿಂದ ಮನವಿ ಸ್ವೀಕರಿಸಿ ಮಾತನಾಡಿ, ‘ತಾಲ್ಲೂಕು ಹಂತದ ಶಿಕ್ಷಕರ ಸಮಸ್ಯೆಗಳ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಮನ್ವಯಾಧಿಕಾರಿ, ತಾಲ್ಲೂಕು ಸಂಘದ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಹಾಗೂ ಕಚೇರಿ ಸಿಬ್ಬಂದಿಯ ಸಭೆ ಕರೆದು ಸ್ಥಳದಲ್ಲೇ ಪರಿಹರಿಸುತ್ತೇವೆ’ ಎಂದರು.

‘ತಾಲ್ಲೂಕುವಾರು ಗುರು ಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡುವಂತೆ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿ’ ಎಂದು ಸಂಘದ ಸದಸ್ಯರು ಮನವಿ ಮಾಡಿದರು.

‘ಜಿಲ್ಲಾ ಗುರು ಭವನ ನಿರ್ಮಾಣದ ಬಗ್ಗೆ ಸದ್ಯದಲ್ಲೇ ಸಂಬಂಧಪಟ್ಟ ಸಮಿತಿಯ ಸಭೆ ಕರೆದು ಕಾರ್ಯ ಚಟುವಟಿಕೆ ಪ್ರಾರಂಭಿಸಲಾಗುವುದು. ಡಿಡಿಪಿಐ ಕಚೇರಿಯಲ್ಲಿ ಶಿಕ್ಷಕರಿಗೆ ಸಂಬಂಧಿಸಿದ ಕಡತಗಳನ್ನು ತುರ್ತಾಗಿ ವಿಲೇವಾರಿ ಮಾಡಲು ಕ್ರಮ ವಹಿಸುತ್ತೇವೆ’ ಎಂದು ತಿಳಿಸಿದರು.

ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಪ್ಪೇಗೌಡ, ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜ್, ಖಜಾಂಚಿ ರೆಡ್ಡಪ್ಪ, ಉಪಾಧ್ಯಕ್ಷ ಓಬಳರೆಡ್ಡಿ, ತಾಲ್ಲೂಕು ಘಟಕದ ಅಧ್ಯಕ್ಷ ನರಸಿಂಹ, ಗೌರವಾಧ್ಯಕ್ಷ ಎಂ.ಎನ್.ಶ್ರೀನಿವಾಸಮೂರ್ತಿ, ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು