ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್‌ ಕಾರ್ಮಿಕರ ಕಷ್ಟಕ್ಕೆ ಸ್ಪಂದನೆ

Last Updated 17 ಮೇ 2020, 15:22 IST
ಅಕ್ಷರ ಗಾತ್ರ

ಕೋಲಾರ: ಮೈಸೂರಿನಿಂದ ಜಾರ್ಖಂಡ್‌ಗೆ ನಗರದ ಮಾರ್ಗವಾಗಿ ಕಾಲ್ನಡಿಗೆಯಲ್ಲಿ ಹೊರಟಿದ್ದ ಕಾರ್ಮಿಕರ ಕಷ್ಟಕ್ಕೆ ಸ್ಪಂದಿಸಿರುವ ತಾಲ್ಲೂಕು ಆಡಳಿತವು ಪ್ರಯಾಣಕ್ಕೆ ರೈಲಿನ ವ್ಯವಸ್ಥೆ ಮಾಡುವುದಾಗಿ ಭಾನುವಾರ ಭರವಸೆ ನೀಡಿದೆ.

ಲಾಕ್‌ಡೌನ್‌ನಿಂದಾಗಿ ಕೆಲಸವಿಲ್ಲದೆ ಜೀವನ ನಿರ್ವಹಣೆಗೆ ತೊಂದರೆಯಾದ ಹಿನ್ನೆಲೆಯಲ್ಲಿ ಜಾರ್ಖಂಡ್‌ನ 10ಕ್ಕೂ ಹೆಚ್ಚು ಕಾರ್ಮಿಕರು ತಮ್ಮ ರಾಜ್ಯಕ್ಕೆ ನಡೆದು ಹೊರಟಿದ್ದರು. ಭಾನುವಾರ ಬೆಳಿಗ್ಗೆ ನಗರ ಪ್ರವೇಶಿಸಿದ ಈ ಕಾರ್ಮಿಕರು ಟೇಕಲ್‌ ರಸ್ತೆಯ ವೇಣುಗೋಪಾಲ ಸ್ವಾಮಿ ಕಲ್ಯಾಣಿ ಬಳಿ ಕುಳಿತು ವಿಶ್ರಾಂತಿ ಪಡೆಯುತ್ತಿದ್ದರು.

ಈ ವಿಷಯ ತಿಳಿದ ತಹಶೀಲ್ದಾರ್‌ ಶೋಭಿತಾ ಅವರು ಕ್ಲಾಕ್‌ ಟವರ್ ಬಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಕೀಯ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿಸಿದರು. ಅಲ್ಲದೇ, ಕಾರ್ಮಿಕರಿಗೆ ಕುಡಿಯುವ ನೀರು ಮತ್ತು ತಿಂಡಿ ವ್ಯವಸ್ಥೆ ಕಲ್ಪಿಸಿದರು.

‘ಮೈಸೂರಿನಲ್ಲಿ ಕಟ್ಟಡಗಳಿಗೆ ಬಣ್ಣ ಬಳಿದು ಜೀವನ ಸಾಗಿಸುತ್ತಿದ್ದೆವು. ಲಾಕ್‌ಡೌನ್‌ ಕಾರಣಕ್ಕೆ ಒಂದೂವರೆ ತಿಂಗಳಿನಿಂದ ಕೆಲಸ ಇಲ್ಲವಾಗಿದೆ. ಕೈಯಲ್ಲಿದ್ದ ಹಣ ಖರ್ಚಾಗಿದ್ದು, ಊರಿಗೆ ಹೋಗಲು ಹಣವಿಲ್ಲ. ಹೀಗಾಗಿ ನಡೆದು ಹೊರಟಿದ್ದೇವೆ. ಮಾಲೂರು ಅಥವಾ ಬಂಗಾರಪೇಟೆಯಿಂದ ಹೋಗುವ ರೈಲಿನಲ್ಲಿ ಊರಿಗೆ ತೆರಳಲು ವ್ಯವಸ್ಥೆ ಮಾಡುವುದಾಗಿ ತಹಶೀಲ್ದಾರ್ ಭರವಸೆ ಕೊಟ್ಟಿದ್ದಾರೆ’ ಎಂದು ಕಾರ್ಮಿಕ ಸಂತೊಷ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT