ಮುಳಬಾಗಿಲು: ದ್ವಿಚಕ್ರ ವಾಹನದಲ್ಲಿ ತಮ್ಮ ಜಮೀನಿನ ಕಡೆಗೆ ಹೋಗುತ್ತಿದ್ದಾಗ ಆಕಸ್ಮಿಕವಾಗಿ ಬೈಕ್ನಿಂದ ಕೆಳಗೆ ಬಿದ್ದು ನಿವೃತ್ತ ಸಬ್ ಇನ್ಸ್ಪೆಕ್ಟರ್ ಟಿ.ವಿ.ಶ್ರೀನಿವಾಸ್ (63) ಶುಕ್ರವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮುಳಬಾಗಿಲು ತಾಲ್ಲೂಕಿನ ತಾಯಲೂರು ಗ್ರಾಮದ ಟಿ.ವಿ.ಶ್ರೀನಿವಾಸ್ ನೆರೆಯ ಆಂಧ್ರಪ್ರದೇಶದಲ್ಲಿದ್ದ ತಮ್ಮ ಜಮೀನು ಕಡೆಗೆ ಹೋಗುವಾಗ ದಾಸಾರ್ಲಹಳ್ಳಿ ಬಳಿ ಮಣ್ಣಿನಲ್ಲಿ ಚಕ್ರಗಳು ಸಿಲುಕಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.

ತಾಲ್ಲೂಕಿನ ನಂಗಲಿ, ಮುಳಬಾಗಿಲು ಮತ್ತಿತರರ ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸಿ, ಮೂರು ವರ್ಷಗಳ ಹಿಂದೆ ನಿವೃತ್ತಿಯಾಗಿದ್ದರು.

ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಮೃತರ ಅಂತ್ಯಕ್ರಿಯೆ ಆಂಧ್ರಪ್ರದೇಶದ ವಿ.ಕೋಟೆಯಲ್ಲಿ ಶನಿವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.