ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನರ್ಹರು ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಿ

Last Updated 3 ಏಪ್ರಿಲ್ 2021, 15:08 IST
ಅಕ್ಷರ ಗಾತ್ರ

ಕೋಲಾರ: ಅನರ್ಹರು ಪಡೆದಿರುವ ಬಿಪಿಎಲ್‌ ಪಡಿತರ ಚೀಟಿಯನ್ನು ಏ.15ರೊಳಗೆ ಸರ್ಕಾರಕ್ಕೆ ಹಿಂದಿರುಗಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

2011ರ ಜನಗಣತಿ ಪ್ರಕಾರ ಜಿಲ್ಲೆಯಲ್ಲಿ 3,33,348 ಕುಟುಂಬಗಳು ಬಡತನ ರೇಖೆಗಿಂತ ಕೆಳಗಿವೆ. 2021 ಮಾರ್ಚ್ ಅಂತ್ಯದವರೆಗೆ ಜಿಲ್ಲೆಯಲ್ಲಿ 3,44,369 ಕುಟುಂಬಗಳಿಗೆ ಬಿಪಿಎಲ್ ಪಡಿತರ ಚೀಟಿ ಮತ್ತು 12,416 ಕುಟುಂಬಗಳಿಗೆ ಆದ್ಯತೇತರ (ಎಪಿಎಲ್) ಪಡಿತರ ಚೀಟಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಆರ್ಥಿಕವಾಗಿ ಸಬಲವಾಗಿರುವ ಕುಟುಂಬಗಳಿಗೆ ಮತ್ತು ಇತರೆ ಅನರ್ಹರಿಗೆ ಆಂತ್ಯೋದಯ ಅನ್ನ ಮತ್ತು ಬಿಪಿಎಲ್ ಪಡಿತರ ಚೀಟಿ ಹಿಂದಿರುಗಿಸಲು ಪದೇ ಪದೇ ಮನವಿ ಮಾಡಲಾಗಿದೆ. ಕೆಲವರು ಮನವಿಗೆ ಸ್ಪಂದಿಸಿ ಬಿಪಿಎಲ್ ಪಡಿತರ ಚೀಟಿ ಹಿಂದುರುಗಿಸಿ ಆದ್ಯತೇತರ ಪಡಿತರ ಚೀಟಿ ಪಡೆದಿದ್ದಾರೆ. ಆದರೆ, ಕೆಲ ಅನರ್ಹ ಕುಟುಂಬಗಳು ಈವರೆಗೂ ಬಿಪಿಎಲ್‌ ಪಡಿತರ ಚೀಟಿ ಹಿಂದಿರುಗಿಸಿಲ್ಲ ಎಂದು ಹೇಳಿದ್ದಾರೆ.

ಸರ್ಕಾರ ನಿಗದಿಪಡಿಸಿರುವ ಮಾನದಂಡಕ್ಕೆ ವಿರುದ್ದವಾಗಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರು ತಕ್ಷಣವೇ ತಾಲ್ಲೂಕಿನ ತಹಶೀಲ್ದಾರ್‌ ಕಚೇರಿಗೆ ಹಿಂದಿರುಗಿಸಿ ಆದ್ಯತೇತರ ಪಡಿತರ ಚೀಟಿ ಪಡೆಯಬೇಕು. ಇಲ್ಲವಾದರೆ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ 1977ರ ಹಾಗೂ ಭಾರತೀಯ ದಂಡ ಸಂಹಿತೆಯಡಿ (ಐಪಿಸಿ) ಪ್ರಕರಣ ದಾಖಲಿಸಿ ಶಿಸ್ತು ಕ್ರಮ ಜರುಗಿಸುತ್ತೇವೆ. ಅಲ್ಲದೇ, ಈವರೆಗೆ ಪಡೆದಿರುವ ಆಹಾರ ಧಾನ್ಯಗಳ ಮಾರುಕಟ್ಟೆ ಮೌಲ್ಯ ಲೆಕ್ಕ ಹಾಕಿ ವಸೂಲು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT