ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ | ನಕಲಿ ಕ್ಲಿನಿಕ್ ಮೇಲೆ ದಾಳಿ: ಬೀಗ

Published 20 ಏಪ್ರಿಲ್ 2024, 13:54 IST
Last Updated 20 ಏಪ್ರಿಲ್ 2024, 13:54 IST
ಅಕ್ಷರ ಗಾತ್ರ

ಕೆಜಿಎಫ್‌: ಅಕ್ರಮವಾಗಿ ಅಲೋಪಥಿ ಕ್ಲಿನಿಕ್ ನಡೆಸುತ್ತಿದ್ದ ಎರಡು ಕ್ಲಿನಿಕ್‌ಗಳ ಮೇಲೆ ಆರೋಗ್ಯ ಇಲಾಖೆಯ ಸಿಬ್ಬಂದಿ ದಾಳಿ ನಡೆಸಿ ಅವುಗಳಿಗೆ ಬೀಗಮುದ್ರೆ ಹಾಕಿದ ಘಟನೆ ಕ್ಯಾಸಂಬಳ್ಳಿಯಲ್ಲಿ ಶುಕ್ರವಾರ ನಡೆದಿದೆ.

ಗ್ರಾಮದಲ್ಲಿ ರಾಮಕೃಷ್ಣರೆಡ್ಡಿ ಎಂಬಾತ ಮಂಜುನಾಥ ಕ್ಲಿನಿಕ್ ಮತ್ತು ಜಯಶಂಕರ ರೆಡ್ಡಿ ವಿನಾಯಕ ಕ್ಲಿನಿಕ್ ಅಕ್ರಮವಾಗಿ ನಡೆಸುತ್ತಿದ್ದರು. ಅವರು ಅಧಿಕೃತ ವೈದ್ಯರಾಗಿಲಿಲ್ಲ. ಈ ಸಂಬಂಧವಾಗಿ ದೂರು ಬಂದ ಹಿನ್ನಲೆಯಲ್ಲಿ ತಾಲ್ಲೂಕು ವೈದ್ಯಾಧಿಕಾರಿ ಡಾ.ಪದ್ಮಾವತಿ, ಆರೋಗ್ಯ ಅಧಿಕಾರಿ ಪ್ರಸನ್ನ ಕುಮಾರ್‌, ಸಿಬ್ಬಂದಿ ರಾಧಾಕೃಷ್ಣ ಸ್ಥಳಕ್ಕೆ ಆಗಮಿಸಿ ಕ್ಲಿನಿಕ್‌ಗೆ ಬೀಗ ಮುದ್ರೆ ಹಾಕಲಾಗಿದೆ. ಜತೆಗೆ ಇಬ್ಬರಿಗೂ ನೋಟಿಸ್ ನೀಡಲಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT