ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್.ಎಲ್.ಜಾಲಪ್ಪ ಒಡೆತನದ ಶಿಕ್ಷಣ ಸಂಸ್ಥೆ, ಆಸ್ಪತ್ರೆ ಮೇಲೆ ಐಟಿ ದಾಳಿ 

ಕೋಲಾರ
Last Updated 10 ಅಕ್ಟೋಬರ್ 2019, 5:14 IST
ಅಕ್ಷರ ಗಾತ್ರ

ಕೋಲಾರ: ನಗರದ ಹೊರ ವಲಯದ ಟಮಕ ಬಳಿ ಇರುವ ಕೇಂದ್ರದ ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ಒಡೆತನದ ಆಸ್ಪತ್ರೆ, ದೇವರಾಜ ಅರಸು ವೈದ್ಯಕೀಯ ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ಗುರುವಾರ ದಾಳಿ‌ ನಡೆಸಿದೆ.

ಹತ್ತಕ್ಕೂಹೆಚ್ಚು ಅಧಿಕಾರಿಗಳ ತಂಡವು ಜಾಲಪ್ಪ ಅವರಶಿಕ್ಷಣ ಸಂಸ್ಥೆ, ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಹಣಕಾಸು ವ್ಯವಹಾರ, ಆದಾಯ, ತೆರಿಗೆ ಪಾವತಿಗೆ ಸಂಬಂಧಿಸಿದ ದಾಖಲೆಪತ್ರಗಳನ್ನು ಪರಿಶೀಲಿಸುತ್ತಿದೆ.

ಸುಮಾರು ಎರಡು ತಾಸಿನಿಂದ ಪರಿಶೀಲನೆ ನಡೆಯುತ್ತಿದ್ದು, ಮಾಧ್ಯಮ ಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ದೊಡ್ಡಬಳ್ಳಾಪುರದಲ್ಲಿರುವ ಜಾಲಪ್ಪ ಅವರ ಪುತ್ರ ರಾಜೇಂದ್ರ ಅವರ ನಿವಾಸ ಹಾಗೂ ಕಚೇರಿ ಮೇಲೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ‌‌‌ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT