ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ದಟ್ಟಣೆ ನಿವಾರಣೆಗೆ ರಸ್ತೆ ಅಗಲೀಕರಣ

Last Updated 13 ಜನವರಿ 2021, 14:23 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲಾ ಕೇಂದ್ರದ ಅಭಿವೃದ್ಧಿಗೆ ಹಲವು ಯೋಜನೆ ಕೈಗೆತ್ತಕೊಳ್ಳಲಾಗಿದೆ. ಮುಖ್ಯವಾಗಿ ನಗರದೊಳಗಿನ ವಾಹನ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಸ್ತೆಗಳ ಅಗಲೀಕರಣಕ್ಕೆ ಆದ್ಯತೆ ನೀಡಲಾಗಿದೆ’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಹೇಳಿದರು.

ಇಫ್ಕೋ ಟೋಕಿಯೊ ಸಂಸ್ಥೆ ವತಿಯಿಂದ ಬಡ ರೋಗಿಗಳ ಚಿಕಿತ್ಸೆಗೆ ಇಲ್ಲಿ ಬುಧವಾರ ಹಣಕಾಸು ನೆರವಿನ ಚೆಕ್‌ ವಿತರಿಸಿ ಮಾತನಾಡಿ, ‘ಇಫ್ಕೋ ಟೋಕಿಯೊ ಸಂಸ್ಥೆಯಿಂದ ಬಡ ರೋಗಿಗಳ ಚಿಕಿತ್ಸೆಗೆ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ 30 ವರ್ಷಗಳಿಂದ ಆರ್ಥಿಕ ನೆರವು ನೀಡಲಾಗುತ್ತಿದೆ’ ಎಂದರು.

‘ಜಿಲ್ಲಾ ಕೇಂದ್ರದ 2 ಪ್ರಮುಖ ರಸ್ತೆಗಳ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿದೆ. ಶಾರದಾ ಚಿತ್ರಮಂದಿರದಿಂದ ಪ್ರಭಾತ್ ಚಿತ್ರಮಂದಿರದವರೆಗಿನ ರಸ್ತೆ ಹಾಗೂ ಶ್ರೀನಿವಾಸಪುರ ರಸ್ತೆ ವೃತ್ತದಿಂದ ಗಾಂಧಿವನದವರೆಗಿನ ರಸ್ತೆ ವಿಸ್ತರಿಸಲಾಗುವುದು. ಇದರಿಂದ ವಾಹನ ಸಂಚಾರ ಸುಗಮವಾಗಲಿದೆ’ ಎಂದು ಅಭಿಪ್ರಾಯಪಟ್ಟರು.

‘ಅಬಕಾರಿ ಸಚಿವರಾಗಿದ್ದ ಎಚ್.ನಾಗೇಶ್ ಉತ್ತಮ ಗುಣವುಳ್ಳವರು. ಸರಳ ವ್ಯಕ್ತಿತ್ವದ ಮತ್ತು ಮೃದು ಧೋರಣೆಯ ಅವರು ಹಿಂದೆ ಜಿಲ್ಲೆಯಲ್ಲೂ ಬೆಸ್ಕಾಂನಲ್ಲಿ ಸೇವೆ ಸಲ್ಲಿಸಿದ್ದರು. ಆಕಸ್ಮಿಕವಾಗಿ ರಾಜಕೀಯ ಪ್ರವೇಶಿಸಿದ ಅವರು ಶಾಸಕರಾಗಿ ಮೊದಲ ಬಾರಿಯೇ ಸಚಿವ ಸ್ಥಾನ ಪಡೆದಿದ್ದರು. ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ಅವರನ್ನು ಸಚಿವ ಸ್ಥಾನದಲ್ಲಿ ಮುಂದುವರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇವೆ’ ಎಂದು ತಿಳಿಸಿದರು.

ಮಂತ್ರಿ ಮಾಡಲಿಲ್ಲ: ‘ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳನ್ನು ಹೇಗೆ ನಡೆಸಿಕೊಳ್ಳುತ್ತಾರೋ ಹಾಗೆ ಆಡಳಿತ ವ್ಯವಸ್ಥೆ ಇರುತ್ತದೆ. ಈ ಹಿಂದೆ ನಾನು ಸಚಿವನಾಗಿದ್ದಾಗ ಜಿಲ್ಲೆಯಲ್ಲಿ ಆಡಳಿತ ಚೆನ್ನಾಗಿತ್ತು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿದ್ದಾಗ ನನಗೆ ಸಚಿವನಾಗುವ ಅವಕಾಶ ಸಿಗಲಿಲ್ಲ. ಅಪ್ಪ ಮಕ್ಕಳು ನನ್ನನ್ನು ಮಂತ್ರಿ ಮಾಡಲಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ತಾಲ್ಲೂಕಿನ ಅರಹಳ್ಳಿಯಲ್ಲಿ ಮಂಗಳವಾರ ನಡೆದ ಸಾರ್ವಜನಿಕರ ಕುಂದು ಕೊರತೆ ಸಭೆಗೆ ತಹಶೀಲ್ದಾರ್ ಬೇಜವಾಬ್ದಾರಿಯಿಂದ ಗೈರಾಗಿದ್ದರು. ಅವರು ಎಲ್ಲಿಗೆ ಹೋಗುತ್ತಾರೆ? ಕೈಗೆ ಸಿಕ್ಕೇ ಸಿಗುತ್ತಾರೆ, ಆಗ ಚಳಿ ಬಿಡಿಸುತ್ತೇನೆ’ ಎಂದು ಗುಡುಗಿದರು.

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮಣ್ಣ, ನಗರಸಭೆ ಸದಸ್ಯ ರಾಕೇಶ್, ಕಸಬಾ ಸೂಸೈಟಿ ಅಧ್ಯಕ್ಷ ಶ್ರೀನಿವಾಸ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT