ಭಾನುವಾರ, ಜನವರಿ 17, 2021
24 °C

ಆರ್‌ಟಿಐ ನಿರ್ಲಕ್ಷ್ಯ: ₹ 10 ಸಾವಿರ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಿವಾಸಪುರ: ತಾಲ್ಲೂಕಿನ ದಳಸನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿ ಸಂತೋಷ್ ಅವರಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ ₹ 10 ಸಾವಿರ ದಂಡ ವಿಧಿಸಿದೆ.

ಮಾಹಿತಿ ಹಕ್ಕು ಕಾರ್ಯಕರ್ತ ಶಬ್ಬೀರ್ ಅಹಮದ್ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ 14ನೇ ಹಣಕಾಸು ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನದ ಮಾಹಿತಿ ನೀಡುವಂತೆ 2017ರಲ್ಲಿ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ್ದರು. ಆದರೆ ಪಿಡಿಒ ಮಾಹಿತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನಿರ್ಲಕ್ಷಿಸಿದ್ದರು. ಈ ಕುರಿತು ಶಬ್ಬೀರ್ ಅಹಮದ್ ಮೇಲ್ಮನವಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು.

ಮೇಲ್ಮನವಿ ಪ್ರಾಧಿಕಾರದ ಆದೇಶವನ್ನೂ ಪಿಡಿಒ ಪಾಲಿಸಿರಲಿಲ್ಲ. ಆಯೋಗ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿತ್ತು. ಪ್ರತಿವಾದಿ ಸೂಕ್ತ ಕಾರಣವಿಲ್ಲದೆ ಆಯೋಗದ ವಿಚಾರಣೆಗೆ ಗೈರುಹಾಜರಾಗಿದ್ದರು. ಕಾರಣ ಕೇಳಿ ನೀಡಿದ್ದ ನೋಟಿಸ್‌ಗೆ ಲಿಖಿತ ಸಮಜಾಯಿಷಿ ನೀಡಿರಲಿಲ್ಲ. ಹಾಗಾಗಿ ದಂಡ ವಿಧಿಸಲಾಗಿದೆ ಎಂದು ರಾಜ್ಯ ಮಾಹಿತಿ ಆಯುಕ್ತ ಎನ್.ಪಿ. ರಮೇಶ್ ಆದೇಶದಲ್ಲಿ ತಿಳಿಸಿದ್ದಾರೆ.

ದಂಡದ ಮೊತ್ತವನ್ನು 2021ರ ಫೆಬ್ರುವರಿ ತಿಂಗಳ ವೇತನದಲ್ಲಿ ಕಡಿತಗೊಳಿಸಿ ಸರ್ಕಾರದ ಲೆಕ್ಕ ಶೀರ್ಷಿಕೆ ಖಾತೆಗೆ ಜಮೆ ಮಾಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಆಯೋಗ ನಿರ್ದೇಶಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.