ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಯಂತ್ರಣಕ್ಕೆ ನಿಯಮ ಪಾಲನೆ ಕಡ್ಡಾಯ

Last Updated 20 ಮೇ 2021, 4:31 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ನಾಗರಿಕರು ಕೊರೊನಾ ತಡೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರ ಮೂಲಕ, ಸೋಂಕು ಹರಡುವುದನ್ನು ತಡೆಯಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿದ್ಯಾರಾಣಿ ಹೇಳಿದರು.

ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲ್ಲೂಕು ಆಡಳಿತ, ಗ್ರಾಮ ಪಂಚಾಯಿತಿ ಹಾಗೂ ಕೊರೊನಾ ಕಾರ್ಯಪಡೆ ವತಿಯಿಂದ ಏರ್ಪಡಿಸಿದ್ದ ಕೊರೊನಾ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.

ಕೊರೊನಾಗೆ ಹೆದರಬೇಕಾಗಿಲ್ಲ. ಮುಂಜಾಗ್ರತೆ ವಹಿಸಬೇಕು. ರೋಗ ಹರಡದಂತೆ ತಡೆಯಬೇಕು. ಕೋವಿಡ್ ಲಕ್ಷಣ ಕಂಡು ಬಂದ ಕೂಡಲೆ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸೋಂಕು ದೃಢಪಟ್ಟಲ್ಲಿ, ಆರೋಗ್ಯ ಇಲಾಖೆ ಸಿಬ್ಬಂದಿ ಹೇಳಿದಂತೆ ನಡೆದುಕೊಳ್ಳಬೇಕು. ಹೋಂ ಕ್ವಾರಂಟೈನ್ ಸೂಚಿಸಿದಲ್ಲಿ, ಮನೆಯಲ್ಲಿಯೇ ಇದ್ದುಕೊಂಡು, ನಿಗದಿತ ಔಷಧಿಗಳನ್ನು ನಿಯಮಿತವಾಗಿ ಸೇವಿಸಬೇಕು. ಅಗತ್ಯ ಇದ್ದಲ್ಲಿ ಕೊರೊನಾ ಕೇರ್ ಕೇಂದ್ರಕ್ಕೆ ಹೋಗಿ ಅಗತ್ಯ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿದರು.

ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ ಮಾತನಾಡಿ, ಕೊರೊನಾ ಸೋಂಕಿತರು ವಿಷಯವನ್ನು ಗುಟ್ಟಾಗಿ ಇಡಬಾರದು. ಹಾಗೆ ಮಾಡುವುದರಿಂದ ಹೆಚ್ಚಿನ ತೊಂದರೆ ಅನುಭವಿಸಬೇಕಾಗುತ್ತದೆ. ಸಮಯಕ್ಕೆ ಸರಿಯಾಗಿ ಅಗತ್ಯ ಚಿಕಿತ್ಸೆ ಪಡೆದುಕೊಂಡರೆ ಸೋಂಕು ನಿವಾರಣೆಯಾಗುತ್ತದೆ. ನಿರ್ಲಕ್ಷ್ಯ ವಹಿಸಿದರೆ ಪರಿಸ್ಥಿತಿ ಬಿಗಡಾಯಿಸುವ ಸಂಭವ ಇರುತ್ತದೆ ಎಂದು ಹೇಳಿದರು.

ಟಾಸ್ಕ್ ಫೋರ್ಸ್ ಸದಸ್ಯರು ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಕೊರೊನಾ ತಡೆ ಕುರಿತು ಜಾಗೃತಿ ಮೂಡಿಸಿದರು. ಕೊರೊನಾ ನಿಯಮ ಪಾಲಿಸುಂತೆ ಮನವಿ ಮಾಡಿದರು.

ಉಪ ತಹಶೀಲ್ದಾರ್ ಚಂದ್ರಪ್ಪ, ಗ್ರಾಮ ಲೆಕ್ಕಾಧಿಕಾರಿ ಭೀಮರಾವ್, ವೆಂಕಟರಾಮಪ್ಪ, ನವೀನ್ ಸಂಪತ್, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT