ಗುರುವಾರ , ಮಾರ್ಚ್ 23, 2023
28 °C

ಶೀಘ್ರವೇ ಶಿಕ್ಷಕರ ಭವನ ಕಾಮಗಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿಲ್ಲಾ ಶಿಕ್ಷಕರ ಭವನದ ಕಾಮಗಾರಿಯನ್ನು ಶೀಘ್ರವೇ ಆರಂಭಿಸಲಾಗುತ್ತದೆ’ ಎಂದು ಸಂಸದ ಎಸ್.ಮುನಿಸ್ವಾಮಿ ಭರವಸೆ ನೀಡಿದರು.

ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಸದಸ್ಯರು ಇಲ್ಲಿ ಮಂಗಳವಾರ ಸಂಸದರನ್ನು ಭೇಟಿಯಾಗಿ ಶಿಕ್ಷಕರ ಭವನ ನಿರ್ಮಾಣ ಮಾಡುವಂತೆ ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಸಂಸದರು, ‘ಶಿಕ್ಷಕರ ಅನುಕೂಲಕ್ಕಾಗಿ ರಾಜ್ಯದೆಲ್ಲೆಡೆ ಎಲ್ಲಾ ಜಿಲ್ಲೆಗಳಲ್ಲೂ ಶಿಕ್ಷಕರ ಭವನ ನಿರ್ಮಿಸಲಾಗಿದೆ. ಆದರೆ, ಕೋಲಾರ ಜಿಲ್ಲೆಯಲ್ಲಿ ಶಿಕ್ಷಕರ ಭವನವಿಲ್ಲ. ಕಾರಣಾಂತರದಿಂದ ಶಿಕ್ಷಕರ ಭವನದ ಕಾಮಗಾರಿ ವಿಳಂಬವಾಗಿದೆ. ಈ ಸಂಗತಿ ನನ್ನ ಗಮನಕ್ಕೆ ಬಂದಿದೆ. ಜಿಲ್ಲೆಯಲ್ಲೂ ಸಾಧ್ಯವಾದಷ್ಟೂ ಬೇಗನೆ ಶಿಕ್ಷಕರ ಭವನ ನಿರ್ಮಿಸಿ’ ಎಂದು ಡಿಡಿಪಿಐ ಕೆ.ಎಂ.ಜಯರಾಮರೆಡ್ಡಿ ಅವರಿಗೆ ಸೂಚಿಸಿದರು.

ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ವಿ.ಜಗನ್ನಾಥ್, ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಜಿ.ಶ್ರೀನಿವಾಸ್, ಬಿಇಒ ಕೆ.ಎಸ್.ನಾಗರಾಜ್‌ಗೌಡ, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಅಪ್ಪಿ ನಾರಾಯಣಸ್ವಾಮಿ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.