ಮಂಗಳವಾರ, ಜನವರಿ 19, 2021
17 °C

ಜಿಲ್ಲೆಯಲ್ಲಿ ಸಕಾಲ ಸಪ್ತಾಹ: ಡಿ.ಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಸಕಾಲ ಯೋಜನೆ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಲು ಹಾಗೂ ಸಕಾಲದಡಿ ಸ್ವೀಕರಿಸಿ ಬಾಕಿ ಉಳಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡುವ ಉದ್ದೇಶಕ್ಕೆ ಸಕಾಲ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ.30ರಿಂದ ಡಿ.5ರವರೆಗೆ ನಗರಾಭಿವೃದ್ಧಿ, ಕಂದಾಯ, ಸಾರಿಗೆ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗ ಇಲಾಖೆಗಳಲ್ಲಿ ಸಪ್ತಾಹ ನಡೆಯುತ್ತದೆ. ನಂತರ ಡಿ.7ರಿಂದ ಡಿ.11ರವರೆಗೆ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಸಪ್ತಾಹ ಆಚರಿಸಲಾಗುವುದು ಎಂದು ಹೇಳಿದ್ದಾರೆ.

ಹೊಸದಾಗಿ ಸ್ವೀಕರಿಸಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡುವುದು, ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವುದು, ಸಕಾಲ ಮಿಷನ್ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವುದು, ಸಕಾಲ ತಂಡದಿಂದ ಕಚೇರಿಗಳಿಗೆ ಭೇಟಿ ಹಾಗೂ ತಪಾಸಣೆ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ, ಹೆಲ್ಪ್ ಡೆಸ್ಕ್ ಸಹಾಯದೊಂದಿಗೆ ಸಾರ್ವಜನಿಕರಿಂದ ಪ್ರಶ್ನಾವಳಿ ಭರ್ತಿ ಮಾಡಿಸುವುದು ಸೇರಿದಂತೆ ಸಕಾಲ ಕುರಿತು ವಿವಿಧ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಸರ್ಕಾರದ ಸೇವೆಗಳನ್ನು ವಿಳಂಬವಿಲ್ಲದೆ, ಕಾಲಮಿತಿಯೊಳಗೆ ನೀಡುವ ಮಹತ್ವಾಕಾಂಕ್ಷೆಯೊಂದಿಗೆ ಕರ್ನಾಟಕ ನಾಗರಿಕ ಸೇವೆಗಳ ಖಾತರಿ ಅಧಿನಿಯಮ–2012 ಜಾರಿಗೊಳಿಸಲಾಗಿದೆ. ಸಕಾಲ ಯೋಜನೆಯಡಿ ಒಟ್ಟು 98 ಇಲಾಖೆ ಹಾಗೂ ಸಂಸ್ಥೆಗಳು. ನಾಗರಿಕ ಕೇಂದ್ರಿತ ಸೇವೆಗಳನ್ನು ಸೇರ್ಪಡೆ ಮಾಡಲಾಗಿದೆ. ಈವರೆಗೆ ರಾಜ್ಯದಲ್ಲಿ ಸುಮಾರು 22.88 ಕೋಟಿ ಅರ್ಜಿ ಸ್ವೀಕರಿಸಲಾಗಿದ್ದು, 22.82 ಕೋಟಿ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.