ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲೂರು | ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ: ಪರಿಶೀಲನೆ

Published 24 ಮಾರ್ಚ್ 2024, 14:13 IST
Last Updated 24 ಮಾರ್ಚ್ 2024, 14:13 IST
ಅಕ್ಷರ ಗಾತ್ರ

ಮಾಲೂರು: ಅವಧಿ ಮೀರಿದ ಆಹಾರ ಪದಾರ್ಥಗಳ ಗೋದಾಮಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಅಂಕಿತ ಅಧಿಕಾರಿ ರಾಕೇಶ್ ಭಾನುವಾರ ಭೇಟಿ ನೀಡಿ ಆಹಾರ ಪದಾರ್ಥ ಪರಿಶೀಲಿಸಿದರು.

ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಆವರಣದಲ್ಲಿ ಇರುವ ಅಂಗಡಿ ಮಳಿಗೆಗಳನ್ನು ಬಾಡಿಗೆ ಪಡೆದಿರುವ ಧನಂಜಯ ಎಂಬುವರು ಅವಧಿ ಮೀರಿರುವ ತಿಂಡಿ, ತಂಪು ಪಾನೀಯ ಮಾರಾಟ ಮಾಡಲು ದಾಸ್ತಾನು ಮಾಡಿದ್ದರು. ದೂರಿನ ಮೇರೆಗೆ ತಹಶೀಲ್ದಾರ್ ಕೆ.ರಮೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು.

ಆಹಾರ ಸುರಕ್ಷತಾ ಅಧಿಕಾರಿ ಡಾ.ರಾಕೇಶ್, ಅವಧಿ ಮೀರಿದ ತಿಂಡಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು. ವರದಿ ಆಧಾರದ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದರು.
ಪುರಸಭಾ ಸದಸ್ಯ ಎಂ.ವಿ ಮರುಳಿಧರ್, ಡಿಎಸ್ಎಸ್ ಮುಖಂಡ ಎಸ್.ಎಂ ವೆಂಕಟೇಶ್, ಕರವೇ ನವೀನ್ ಇನ್ನಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT