ಮಾಲೂರಿನ ಕೂರಂಡಹಳ್ಳಿ ಅರಣ್ಯದಲ್ಲಿ ನಿರ್ಮಾಣ ಮಾಡಿರುವ ಪಾರ್ಕಿನಲ್ಲಿ ಅತ್ಯುತ್ತಮ ಮತ್ತು ಅತ್ಯಾಧುನಿಕ ಉಪಕರಣಗಳನ್ನು ಅಳವಡಿಸಲಾಗಿದೆ. ಮಕ್ಕಳೊಂದಿಗೆ ಕುಟುಂಬದ ಸದಸ್ಯರು ಒಟ್ಟಾಗಿ ಭೇಟಿ ನೀಡಬಹುದು. ಯಾವುದೇ ಶುಲ್ಕವಿಲ್ಲ. ಬೆಳಗ್ಗೆ 10 ರಿಂದ ಸಂಜೆ 5ಗಂಟೆವರೆಗೂ ಸಾರ್ವಜನಿಕರ ಭೇಟಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಉತ್ತಮ ವಾತವರಣ, ಸುತ್ತಲೂ ಗಿಡ ಮರಗಳಿಂದ ಕೂಡಿದ್ದು, ಮನಸ್ಸಿಗೆ ಉಲ್ಲಾಸ ಉಂಟಾಗುತ್ತದೆ. ಪಕ್ಕದಲ್ಲೇ ಅರಣ್ಯ ಇಲಾಖೆಗೆ ಸೇರಿದ ನರ್ಸರಿ ಇರುವುದರಿಂದ ಸರ್ಕಾರ ಬೆಲೆಗೆ ಉತ್ತಮ ಸಸಿಗಳನ್ನು ಸಹ ಕೊಳ್ಳಬಹುದು.