ಮಂಗಳವಾರ, ಜನವರಿ 31, 2023
18 °C
ಚಿತ್ರದುರ್ಗದಲ್ಲಿ ಕಾಂಗ್ರೆಸ್‌ನಿಂದ ಆಯೋಜನೆ– 5 ಲಕ್ಷ ಜನ ಸೇರುವ ನಿರೀಕ್ಷೆ: ಮುನಿಯಪ್ಪ

8ಕ್ಕೆ ಎಸ್‌.ಸಿ, ಎಸ್‌.ಟಿ ಐಕ್ಯತಾ ಸಮಾವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಕಾಂಗ್ರೆಸ್‌ ಆಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ರಾಜ್ಯಮಟ್ಟದ ಐಕ್ಯತಾ ಸಮಾವೇಶ ಜ.8ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗದಲ್ಲಿ ಆಯೋಜಿಸಲಾಗಿದೆ’ ಎಂದು ಕೇಂದ್ರ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

‘ಸಮಾವೇಶದಲ್ಲಿ 5 ಲಕ್ಷ ಮಂದಿ ಭಾಗಿಯಾಗುವ ನಿರೀಕ್ಷೆ ಇದ್ದು, ಕಾಂಗ್ರೆಸ್‌ಗೆ ಶಕ್ತಿ ತುಂಬುವ ಕಾರ್ಯಕ್ರಮ ಇದಾಗಲಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಬಿ.ಕೆ.ಹರಿಪ್ರಸಾದ್ ಸೇರಿದಂತೆ ರಾಜ್ಯದ ಹಲವು ಮುಖಂ ಡರು ಭಾಗವಹಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ನಾಯಕರಾದ ಡಾ.ಜಿ. ಪರಮೇಶ್ವರ, ಸತೀಶ ಜಾರಕಿಹೊಳಿ, ನಾನು ಸಮಾ ವೇಶದ ನೇತೃತ್ವ ವಹಿಸಿದ್ದೇವೆ’ ಎಂದು ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು‌.

‘ಸಂವಿಧಾನ ಆಶಯದಂತೆ ಕಾಂಗ್ರೆಸ್ ಪಕ್ಷವು ಆಡಳಿತ ನಡೆಸುತ್ತಾ ಬಂದಿದ್ದು, ಗಾಂಧೀಜಿ ತೋರಿದ ಮಾರ್ಗದಲ್ಲಿ ದೇಶ ಕಟ್ಟುವ ಕೆಲಸ ಮಾಡಿದೆ. ಭಯೋತ್ಪಾದನೆ ಬೆಂಬಲಿಸಿ ದೇಶ ಒಡೆಯುವ ಕೆಲಸ ಎಂದೂ ಮಾಡಿಲ್ಲ. ಆದರೆ, ಬಿಜೆಪಿ ದೇಶ, ಧರ್ಮ, ಜಾತಿಗಳನ್ನು ಒಡೆದು, ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಈ ಬಗ್ಗೆ ಸಮಾವೇಶದಲ್ಲಿ ಚರ್ಚಿಸಲಾಗುವುದು’ ಎಂದರು.

ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಊರುಬಾಗಿಲು ಶ್ರೀನಿವಾಸ್‌, ಕಾಂಗ್ರೆಸ್ ನಗರ ಬ್ಲಾಕ್‌ ಅಧ್ಯಕ್ಷ ಪ್ರಸಾದ್‌ ಬಾಬು, ಗ್ರಾಮೀಣ ಅಧ್ಯಕ್ಷ ಉದಯ್‌ಶಂಕರ್, ಎಸ್‌ಸಿ ಘಟಕದ ಜಿಲ್ಲಾಧ್ಯಕ್ಷ ಕೆ.ಜಯದೇವ್, ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ನಾಗರಾಜ್‌, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸೀತಿಹೊಸೂರು ಮುರಳಿ, ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಯಕ್ಬಾಲ್ ಆಹ್ಮದ್, ಹಿಂದುಳಿದ ಘಟಕದ ಅಧ್ಯಕ್ಷ ನಾಗರಾಜ್, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ರತ್ನಮ್ಮ, ಕಾರ್ಮಿಕ ಘಟಕ ಅಧ್ಯಕ್ಷ ಯಲ್ಲಪ್ಪ, ಮುಖಂಡರಾದ ಜೆ.ಕೆ. ಜಯಕೃಷ್ಣ, ರಾಮಯ್ಯ, ನಾಗರಾಜ್, ಕೋಡಿಯಪ್ಪ, ರಮೇಶ್ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು