ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ | ಎಸ್‌ಸಿ ಯುವಕನ ಆತ್ಮಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ಸೆರೆ

Last Updated 3 ಡಿಸೆಂಬರ್ 2022, 10:35 IST
ಅಕ್ಷರ ಗಾತ್ರ

ನಂಗಲಿ (ಕೋಲಾರ ಜಿಲ್ಲೆ): ಬೇವಹಳ್ಳಿ ಗ್ರಾಮದ ಪರಿಶಿಷ್ಟ ಜಾತಿಯ ಯುವಕ ಉದಯ್‌ ಕಿರಣ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರೂ ಆರೋಪಿಗಳನ್ನು ನಂಗಲಿ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.

‘ಯುವಕನ ಆತ್ಮಹತ್ಯೆ ಬಳಿಕ ಪೆತ್ಲಾಂಡ್ಲಹಳ್ಳಿಯ ಆರೋಪಿಗಳು ತಲೆಮರೆಸಿಕೊಂಡಿದ್ದರು. ಅವರಲ್ಲಿ ಮುನಿವೆಂಕಟಪ್ಪ ಎಂಬಾತನನ್ನು ಶುಕ್ರವಾರ ಬಂಧಿಸಿದ್ದೆವು. ಪ್ರಮುಖ ಆರೋಪಿ ರಾಜು, ಶಿವರಾಜ್‌ ಹಾಗೂಗೋಪಾಲಕೃಷ್ಣಪ್ಪ ಅವರ ಪ‍ತ್ತೆಗೆ ಶೋಧ ಮುಂದುವರಿಸಿದ್ದೆವು. ಶನಿವಾರ ಅವರನ್ನೂ ಬಂಧಿಸಿದ್ದು, ತನಿಖೆ ತೀವ್ರಗೊಳಿಸಿದ್ದೇವೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ. ದೇವರಾಜ್‌ ತಿಳಿಸಿದರು.

ಬೈಕ್‌ ಹಿಂದಿಕ್ಕಿದ ಎಂಬ ಕಾರಣಕ್ಕಾಗಿ ಪರಿಶಿಷ್ಟ ಜಾತಿ ಸಮುದಾಯದ ಯುವಕನನ್ನು ಒಕ್ಕಲಿಗ ಸಮುದಾಯದ ನಾಲ್ವರು ಬುಧವಾರ ಪೆತ್ತಾಂಡ್ಲಹಳ್ಳಿ ಗ್ರಾಮದಲ್ಲಿ ಥಳಿಸಿದ್ದರು. ಇದರಿಂದ ಮನನೊಂದಆತ ಆತ್ಮಹತ್ಯೆ ಮಾಡಿಕೊಂಡಿದ್ದ.

ಈ ಮಧ್ಯೆ, ಉದಯ್‌ ಕಿರಣ್‌ ವಿರುದ್ಧ2019ರ ಏಪ್ರಿಲ್‌ನಲ್ಲಿ ಕೊಲೆ ಪ‍್ರಕರಣ ದಾಖಲಾಗಿತ್ತು ಎಂಬುದು ಗೊತ್ತಾಗಿದೆ. ಬುಧವಾರ ಆರೋಪಿಗಳು ಈ ವಿಚಾರ ಪ್ರಸ್ತಾಪಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಬೇವಹಳ್ಳಿ ಗ್ರಾಮದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT