ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

ಸೆ.5ರ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನ
Last Updated 3 ಸೆಪ್ಟೆಂಬರ್ 2021, 14:33 IST
ಅಕ್ಷರ ಗಾತ್ರ

ಕೋಲಾರ: 2021–22ನೇ ಸಾಲಿನ ಜಿಲ್ಲೆಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ವಿಭಾಗದಿಂದ ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಈ ಶಿಕ್ಷಕರನ್ನು ಸೆ.5ರಂದು ನಡೆಯುವ ಶಿಕ್ಷಕರ ದಿನಾಚರಣೆಯಂದು ಸನ್ಮಾನಿಸಲಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಬಂಗಾರಪೇಟೆ ತಾಲ್ಲೂಕಿನ ಕೆಂಪಾಪುರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಮಹಮದಿ ಬೇಗಂ, ಕೆಜಿಎಫ್ ತಾಲ್ಲೂಕಿನ ಕರಿಮಾನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ನಾರಾಯಣಸ್ವಾಮಿ, ಕೋಲಾರ ತಾಲ್ಲೂಕಿನ ಸೋಮಸಂದ್ರ ಸರ್ಕಾರಿ ಕಿರಿಯ ಪ್ರಾರ್ಥಮಿಕ ಶಾಲೆಯ ಸಹ ಶಿಕ್ಷಕ ಎಸ್‌.ರಮೇಶ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಅದೇ ರೀತಿ ಮಾಲೂರು ತಾಲ್ಲೂಕಿನ ಕಂಬಿಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಬಿ.ಎಂ.ಉಮೇಶ್‌ಕುಮಾರ್, ಮುಳಬಾಗಿಲು ತಾಲ್ಲೂಕಿನ ಪಟ್ರಹಳ್ಳಿ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಬಿ.ಎಂ.ಸೋಮೇಶ್, ಶ್ರೀನಿವಾಸಪುರ ತಾಲ್ಲೂಕಿನ ಹೊಸೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎನ್‌.ಆರ್‌.ರಮೇಶ್ ಆಯ್ಕೆಯಾಗಿದ್ದಾರೆ.

ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬಂಗಾರಪೇಟೆ ತಾಲ್ಲೂಕಿನ ಗುಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ವೆಂಕಟೇಶಪ್ಪ, ಕೆಜಿಎಫ್ ತಾಲ್ಲೂಕಿನ ದೊಡ್ಡೂರು ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಕೆ.ಧನಲಕ್ಷ್ಮಿ, ಕೋಲಾರ ತಾಲ್ಲೂಕಿನ ಮೆಥೋಡಿಸ್ಟ್ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಹೇಮಾ, ಮಾಲೂರು ತಾಲ್ಲೂಕಿನ ಹುರುಳಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಎಂ.ಬಿ.ಕೋದಂಡರಾಮಯ್ಯ ಆಯ್ಕೆಯಾಗಿದ್ದಾರೆ.

ಜತೆಗೆ ಮುಳಬಾಗಿಲು ತಾಲ್ಲೂಕಿನ ಸರ್ಕಾರಿ ಕನ್ನಡ ಡಿವಿಜಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಎಸ್‌.ಕೆ.ಪದ್ಮಾವತಿ, ಶ್ರೀನಿವಾಸಪುರ ತಾಲ್ಲೂಕಿನ ಮರಸನಪಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ವೆಂಕಟರಮಣಪ್ಪ ಅವರು ಆಯ್ಕೆಯಾಗಿದ್ದಾರೆ.

ಪ್ರೌಢ ಶಾಲಾ ವಿಭಾಗದಿಂದ ಬಂಗಾರಪೇಟೆ ತಾಲ್ಲೂಕಿನ ಬೇತಮಂಗಲ ಗ್ರಾಮೀಣ ಪ್ರೌಢ ಶಾಲೆಯ ಶಿಕ್ಷಕ ಕೆ.ಸಿ.ಗೋಪಾಲಗೌಡ, ಕೆಜಿಎಫ್ ತಾಲ್ಲೂಕಿನ ಬಿಜಿಎಂಎಲ್ ಪ್ರೌಢ ಶಾಲೆ ಶಿಕ್ಷಕ ಜಿ.ಅಮರನಾಥ ಶೆಟ್ಟಿ, ಕೋಲಾರ ತಾಲ್ಲೂಕಿನ ಮುದುವಾಡಿ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕ ಜಿ.ಆರ್. ಶಂಕರೇಗೌಡ, ಮಾಲೂರು ತಾಲ್ಲೂಕಿನ ದೊಡ್ಡಶಿವಾರ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕ ಗುಲ್ಜಾರ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಅಲ್ಲದೇ, ಮುಳಬಾಗಿಲು ತಾಲ್ಲೂಕಿನ ಪತ್ತಿಮಿಟ್ಟೆ ಜನತಾ ವಿದ್ಯಾದತ್ತಿ ಶಾಲೆ ಶಿಕ್ಷಕ ಪಿ.ರಾಮಚಂದ್ರಪ್ಪ, ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ನ್ಯಾಷನಲ್ ಪ್ರೌಢ ಶಾಲೆ ಶಿಕ್ಷಕ ಪ್ರಕಾಶಯ್ಯ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT