ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Last Updated 2 ಜುಲೈ 2020, 16:00 IST
ಅಕ್ಷರ ಗಾತ್ರ

ಕೋಲಾರ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಸ್ವಯಂ ಪ್ರೇರಿತಾ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಜಿ.ಪಂ ಉಪ ಕಾರ್ಯದರ್ಶಿ ಸಂಜೀವಪ್ಪ, ‘ಕೋವಿಡ್–19 ಆತಂಕದ ಹಿನ್ನೆಲೆಯಲ್ಲಿ ರಾಜ್ಯದ ರಕ್ತನಿಧಿ ಕೇಂದ್ರಗಳಲ್ಲಿ ರಕ್ತ ಸಂಗ್ರಹಣೆ ಪ್ರಮಾಣ ಗಣನೀಯವಾಗಿ ಕುಸಿದಿದೆ. ರಕ್ತದ ಕೊರತೆಯಿಂದಾಗಿ ಗರ್ಭಿಣಿಯರು, ಅಪಘಾತದ ಗಾಯಾಳುಗಳ ಚಿಕಿತ್ಸೆಗೆ ದೊಡ್ಡ ಸಮಸ್ಯೆಯಾಗಿದೆ’ ಎಂದರು.

‘ರಾಜ್ಯದಲ್ಲಿ ರಕ್ತ ಸಂಗ್ರಹಣೆ ಪ್ರಮಾಣ ಕಡಿಮೆಯಾಗಿರುವ ಸಂಬಂಧ ಸರ್ಕಾರದಿಂದ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಜಿ.ಪಂ ಸಿಬ್ಬಂದಿ ವತಿಯಿಂದ ರಕ್ತದಾನ ಮಾಡಿಸಲಾಗುತ್ತಿದೆ. ರಕ್ತ ಮಾರುಕಟ್ಟೆಯಲ್ಲಿ ಸಿಗುವುದಿಲ್ಲ. ರಕ್ತವು ಜೀವ ಉಳಿಸಲು ನೀಡುವ ಉಡುಗೊರೆ’ ಎಂದು ಹೇಳಿದರು.

‘ಎಸ್‍ಎನ್‍ಆರ್ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ಈ ಶಿಬಿರ ನಡೆಸಲಾಗುತ್ತಿದೆ. ಶಿಬಿರದಲ್ಲಿ ಸುಮಾರು 50 ಯೂನಿಟ್‌ ರಕ್ತ ಸಂಗ್ರಹಿಸುವ ಗುರಿಯಿದೆ. ‘ರಕ್ತದಾನ ಮಾಡುವುದರಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಆಗುವುದಿಲ್ಲ. ರಕ್ತದಾನಿಗಳು ಜೀವ ರಕ್ಷಕರು’ ಎಂದು ತಿಳಿಸಿದರು.

‘ಕೋವಿಡ್‌–19ರ ಸಂಕಷ್ಟದ ಸಂದರ್ಭದಲ್ಲಿ ರಕ್ತದ ಕೊರತೆ ಕಾರಣಕ್ಕೆ ಸಾಕಷ್ಟು ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮುಂದೂಡಲಾಗುತ್ತಿದೆ. ರಕ್ತದ ಕೊರತೆ ನೀಗಿಸಲು ರಕ್ತದಾನ ಶಿಬಿರ ನಡೆಸುತ್ತಿದ್ದೇವೆ. ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಹಾಗೂ ಪಿಡಿಒಗಳು ಶಿಬಿರದಲ್ಲಿ ರಕ್ತದಾನ ಮಾಡಿದ್ದಾರೆ’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT