ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ನಂದಿನಿ' ಹೆಸರಲ್ಲಿ ಕಲಬೆರಕೆ ತುಪ್ಪ ಮಾರಾಟ: 75 ಬಾಕ್ಸ್ ಜತೆಗೆ ವ್ಯಕ್ತಿ ವಶ

Last Updated 19 ಜನವರಿ 2023, 11:47 IST
ಅಕ್ಷರ ಗಾತ್ರ

ಕೋಲಾರ: ಕಲಬೆರಕೆ ತುಪ್ಪವನ್ನು ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ಅಂಗಡಿಗಳಿಗೆ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ತುಪ್ಪದ 75 ಬಾಕ್ಸ್ ಹಾಗೂ ವಾಹನ ವಶಪಡಿಸಿಕೊಂಡಿದ್ದಾರೆ.

‌ಬೆಂಗಳೂರಿನ ಮಾರತಹಳ್ಳಿಯ ಶರವಣ ಎಂಬಾತ ಕಲಬೆರಕೆ ತುಪ್ಪವನ್ನು ಕೆಎಂಎಫ್ ಬ್ರ್ಯಾಂಡ್‌ನ ಸ್ಯಾಚೆಟ್‌ಗಳಲ್ಲಿ ತುಂಬಿ ಮಾರಾಟ ಮಾಡುತ್ತಿದ್ದದ್ದು ಕಂಡುಬಂದಿದ್ದು, ಪ್ರಕರಣ ದಾಖಲಿಸಲಾಗಿದೆ.

‘ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಕಲಬೆರಕೆ ತುಪ್ಪವನ್ನು ಪ್ರಯೋಗಾಲಯಕ್ಕೆ ರವಾನಿಸಿದ್ದು, ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು’ ಎಂದು ಗ್ರಾಮಾಂತರ ಠಾಣೆ ಸರ್ಕಲ್‌ ಇನ್‌ಸ್ಟೆಕ್ಟರ್ ಅಯ್ಯಣ್ಣರೆಡ್ಡಿ
ತಿಳಿಸಿದರು.

ಆರೋಪಿಯು ಕಲಬೆರಕೆ ಮಾಡಿದ ತುಪ್ಪವನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಎಂಬುದು ಗೊತ್ತಾಗಿದೆ.

ಕೋಲಾರ ಜಿಲ್ಲಾ ಸಹಕಾರ ಒಕ್ಕೂಟದ (ಕೋಮುಲ್) ಮಾರುಕಟ್ಟೆ ವಿಭಾಗದ ಅಧಿಕಾರಿ ನಂಜುಂಡಗೌಡ ಕೋಲಾರದ ಕಠಾರಿಪಾಳ್ಯ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ನಂದಿನಿ ತುಪ್ಪ ಮಾರಾಟದ ವಾಹನ ಕಾಣಿಸಿದೆ. ತಮ್ಮ ಒಕ್ಕೂಟದ್ದಲ್ಲದ ವಾಹನ ಕುರಿತು ಮಾಹಿತಿ ವಿಚಾರಿಸಿದಾಗ ಕೃತ್ಯ ಹೊರಬಂದಿದೆ.

‘ನಂದಿನಿ ತುಪ್ಪ ಖರೀದಿಸಿ ಅದಕ್ಕೆ ಕಲಬೆರಕೆ ಮಾಡಿ ಮಾರಾಟ ಮಾಡಿರುವುದು ಪತ್ತೆಯಾಗಿದೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದೆವು’ ಎಂದು ಒಕ್ಕೂಟದ ಅಧ್ಯಕ್ಷ ಕೆ.ವೈ.ನಂಜೇಗೌಡ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT