ಕೋಲಾರ: ರಾಜ್ಯ ಸರ್ಕಾರ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರನ್ನು ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಡಾ.ಆರ್.ಸೆಲ್ವಮಣಿ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಿಸಿ ಶನಿವಾರ ಆದೇಶ ಹೊರಡಿಸಿದೆ.

2013ರ ಬ್ಯಾಚ್ನ ಐಎಎಸ್ ಅಧಿಕಾರಿಯಾದ ಸೆಲ್ವಮಣಿ ಅವರು ಸದ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದಾರೆ. ಅವರು ಸೋಮವಾರ (ಫೆ.15) ಕಾರ್ಯಭಾರ ವಹಿಸಿಕೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಮೂಲಗಳು ತಿಳಿಸಿವೆ.

ಸತ್ಯಭಾಮ ಅವರು 2020ರ ಮಾರ್ಚ್ 7ರಂದು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಜಿಲ್ಲೆಯಲ್ಲಿ ಒಂದು ವರ್ಷ ಅಧಿಕಾರಾವಧಿ ಪೂರೈಸುವ ಮುನ್ನವೇ ಅವರನ್ನು ವರ್ಗಾವಣೆ ಮಾಡಲಾಗಿದೆ. ಸರ್ಕಾರ ಅವರನ್ನು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ (ಕೆಎಸ್ಎಸ್ಐಡಿಸಿ) ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ನಿಯೋಜಿಸಿ ಆದೇಶ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.