ಭಾನುವಾರ, ಅಕ್ಟೋಬರ್ 24, 2021
25 °C

ಕೆಎಸ್‌ಆರ್‌ಟಿಸಿ ಬಸ್‌ನಿಂದ ಸರಣಿ ಅಪಘಾತ: ತಂದೆ–ಮಗಳ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ತಾಲ್ಲೂಕಿನ ಚಿಂತಾಮಣಿ ರಸ್ತೆಯ ಶೆಟ್ಟಿಮಾದಮಂಗಲ ಗೇಟ್ ಬಳಿ ಗುರುವಾರ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದು ಸಂಭವಿಸಿದ ಸರಣಿ ಅಪಘಾತದಲ್ಲಿ ತಂದೆ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೋಲಾರದ ವಿನೋಭಾ ನಗರದ ರಾಜು (40) ಮತ್ತು ಅವರ ಮಗಳು ಬಿಂದು (8) ಮೃತಪಟ್ಟವರು. ಪೇಂಟಿಂಗ್‌ ಕೆಲಸ ಮಾಡುತ್ತಿದ್ದ ರಾಜು ಅವರು ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಸಂಬಂಧಿಕರ ಮನೆಯಿಂದ ಮಗಳನ್ನು ಕರೆದುಕೊಂಡು ದ್ವಿಚಕ್ರ ವಾಹನದಲ್ಲಿ ಕೋಲಾರಕ್ಕೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಕೋಲಾರದಿಂದ ಚಿಂತಾಮಣಿಗೆ ಹೋಗುತ್ತಿದ್ದ ಬಸ್‌ನ ಮುಂಭಾಗದ ಟಯರ್‌ ಸ್ಫೋಟಗೊಂಡಿದ್ದರಿಂದ ಬಸ್‌ ಅಡ್ಡಾದಿಡ್ಡಿ ಚಲಿಸಿ ಎದುರುಗಡೆಯಿಂದ ಬರುತ್ತಿದ್ದ ಸರಕು ಸಾಗಣೆ ವಾಹನಕ್ಕೆ ಡಿಕ್ಕಿ ಹೊಡೆದಿದೆ. ನಂತರ ಸರಕು ಸಾಗಣೆ ವಾಹನದ ಹಿಂಭಾಗದಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಗುದ್ದಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಅಶೋಕ್‌ ಅವರು ತೀವ್ರವಾಗಿ ಗಾಯಗೊಂಡಿದ್ದು, ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೀಡಾದ ಬಸ್‌ನಲ್ಲಿ ಸುಮಾರು 25 ಮಂದಿ ಪ್ರಯಾಣಿಕರಿದ್ದರು. ಈ ಪೈಕಿ 7 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಅಪಘಾತದ ತೀವ್ರತೆಗೆ ಬಸ್‌, ಸರಕು ಸಾಗಣೆ ವಾಹನ ಹಾಗೂ ದ್ವಿಚಕ್ರ ವಾಹನ ನಜ್ಜುಗುಜ್ಜಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು