ಮಂಗಳವಾರ, ಸೆಪ್ಟೆಂಬರ್ 21, 2021
21 °C

ಬಂಗಾರಪೇಟೆ: ರೈತ ಸಂಘದ ಮುಖಂಡರ ಸೇವೆ ಸ್ಮರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಂಗಾರಪೇಟೆ: ರಾಜ್ಯ ರೈತ ಸಂಘದ ಉಪಾಧ್ಯಕ್ಷ ಜಿ.ಟಿ. ರಾಮಸ್ವಾಮಿ ಹಾಗೂ ಮುಖಂಡ ರಾಮು ಅವರು ನರಗುಂದದಲ್ಲಿ 41ನೇ ರೈತ ಹುತಾತ್ಮರ ದಿನಾಚರಣೆ ಮುಗಿಸಿ ಊರಿಗೆ ಹಿಂತಿರುಗುವಾಗ ಅಪಘಾತದಲ್ಲಿ ಮೃತಪಟ್ಟಿರುವುದು ಅತೀವ ನೋವುಂಟು ಮಾಡಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಮರಗಲ್ ಶ್ರೀನಿವಾಸ್ ಹೇಳಿದರು.

ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ಸಂಘಟನೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿ.ಟಿ. ರಾಮಸ್ವಾಮಿ ಹಾಗೂ ರಾಮು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಅವರು ಮಾತನಾಡಿದರು.

ರಾಮಸ್ವಾಮಿ ಅವರ ಸಂಘಟನೆ ಮತ್ತು ಸೇವೆ ಸ್ಮರಣೀಯ. ಅವರ ಅಗಲಿಕೆಯಿಂದ ಸಂಘಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು.

ಸಂಘದ ಜಿಲ್ಲಾ ಅಧ್ಯಕ್ಷ ಮರಗಲ್ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸರ್ಕಲ್ ಇನ್‌ಸ್ಪೆಕ್ಟರ್ ಸುನೀಲ್ ಕುಮಾರ್, ಸಬ್ಇನ್‌ಸ್ಪೆಕ್ಟರ್ ಜಗದೀಶ್‌ ರೆಡ್ಡಿ, ಶಿರಸ್ತೇದಾರ್ ಅಜಯ್, ರೈತ ಸಂಘದ ತಾಲ್ಲೂಕು ಅಧ್ಯಕ್ಷ ಐತಾಂಡಹಳ್ಳಿ ಅಮರೇಶ್, ಮಾರುತಿನಗರ ಪ್ರಕಾಶ್, ಬೃಹಾನುದ್ದೀನ್, ಮುಜಾಮಿಲ್, ವೆಂಕಟೇಶ್, ಚೌಡಪ್ಪ, ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ಯಲ್ಲೇಶ್, ನವೀನ್, ಕಿರಣ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು