ಬುಧವಾರ, 29 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಪಿಎಸ್‍ಐ ಸೇರಿ 7 ಪೊಲೀಸರು ಅಮಾನತು

ಜಿಲ್ಲೆಯಲ್ಲಿ ಇಬ್ಬರು ಕಾಂಗ್ರೆಸ್ ಮುಖಂಡರ ಕೊಲೆ ಪ್ರಕರಣ
Published 6 ನವೆಂಬರ್ 2023, 6:50 IST
Last Updated 6 ನವೆಂಬರ್ 2023, 6:50 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೊಲೆ ಪ್ರಕರಣಗಳ ಹಿನ್ನೆಲೆಯಲ್ಲಿ ಶಿಸ್ತುಕ್ರಮಕ್ಕೆ ಮುಂದಾಗಿರುವ ಪೊಲೀಸ್ ಇಲಾಖೆ ಕರ್ತವ್ಯ ಲೋಪದಡಿ ಸಬ್ ಇನ್‌ಸ್ಪೆಕ್ಟರ್, ಎಎಸ್‍ಐ ಸೇರಿದಂತೆ 7 ಮಂದಿಯನ್ನು ಅಮಾನತು ಮಾಡಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಆದೇಶ ಹೊರಡಿಸಿರುವುದು ಗೊತ್ತಾಗಿದೆ.

ಅ.23 ರಂದು ಶ್ರೀನಿವಾಸಪುರದ ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೌನ್ಸಿಲರ್ ಶ್ರೀನಿವಾಸ್ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಶ್ರೀನಿವಾಸಪುರ ಠಾಣೆ ಸಬ್‌ ಇನ್‌ಸ್ಪೆಕ್ಟರ್ ಈಶ್ವರಪ್ಪ, ಅದೇ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ದೇವರಾಜ್ ರೆಡ್ಡಿ, ಕಾನ್‌ಸ್ಟೆಬಲ್‌ ಮಂಜುನಾಥ್‍ ಅವರನ್ನು ಅಮಾನತು ಮಾಡಲಾಗಿದೆ.

ಮಾಲೂರು ತಾಲ್ಲೂಕಿನ ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ ಕುಮಾರ್ ಕೊಲೆ ಪ್ರಕರಣದಲ್ಲೂ ಕರ್ತವ್ಯ ಲೋಪದ ಆರೋಪದ ಮೇರೆಗೆ ಮಾಲೂರು ಠಾಣೆಯ ಎಎಸ್‍ಐ ಪ್ರಕಾಶ್, ಬೀಟ್ ಕಾನಸ್ಟೆಬಲ್‍ಗಳಾದ ರಾಮಪ್ಪ, ಅನಂತಮೂರ್ತಿ ಅವರನ್ನು ಅಮಾನತು ಮಾಡಲಾಗಿದೆ.

ಉಳಿದಂತೆ ಇಲಾಖೆಯಲ್ಲಿ ಅಶಿಸ್ತು ಹಿನ್ನೆಲೆಯಲ್ಲಿ ಡಿಎಆರ್ ಕಾನ್‌ಸ್ಟೆಬಲ್‌ ಅನಿಲ್ ಕುಮಾರ್‌ ಅವರನ್ನೂ ಅಮಾನತುಗೊಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT