ಗುರುವಾರ , ಸೆಪ್ಟೆಂಬರ್ 23, 2021
22 °C

ಹೊಲಿಗೆ ಯಂತ್ರ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಕೊರೊನಾದಿಂದ ಜನರು ಸಂಕಷ್ಟ ಅನುಭವಿಸಿದ್ದಾರೆ. ಹಿಂದುಳಿದ ಸಮುದಾಯಗಳ ಅರ್ಹ ಫಲಾನುಭವಿಗಳಿಗೆ ವಿತರಿಸಲು ಪ್ರತಿ ಜಿಲ್ಲೆಗೆ ಒಂದು ಸಾವಿರ ಹೊಲಿಗೆ ಯಂತ್ರಗಳನ್ನು ನೀಡಲಾಗುವುದು’ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಆರ್.ರಘು ಕೌಟಿಲ್ಯ ತಿಳಿಸಿದರು.

ನಗರದ ಡಿ. ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಹಿಂದುಳಿದ ವರ್ಗಗಳ ಅಭಿವೃದ್ಧಿ ಕುರಿತು ಚಿಂತನ- ಮಂಥನ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ತಾಲ್ಲೂಕಿನ ಕನಿಷ್ಠ ನೂರು ಜನ ನಿರುದ್ಯೋಗಿಗಳಿಗೆ ನಿಗಮದಿಂದ ಕೌಶಲ ತರಬೇತಿ ನೀಡಿ ಸ್ವಾವಲಂಬಿ ಜೀವನ ನಡೆಸಲು ಅನುಕೂಲ ಮಾಡಲಾ ಗುವುದು. ಸಮಾಜದಲ್ಲಿ ಕಸುಬು ಆಧಾರಿತ ಸಮುದಾಯಗಳು ಮಹತ್ವದ ಪಾತ್ರ ನಿರ್ವಹಿಸುತ್ತಿವೆ ಎಂದರು.

ಕೌಶಲ ತರಬೇತಿಯನ್ನು ನಿಗಮದ ಮೂಲಕ ನೀಡಲಾಗುವುದು. ದೇಶೀಯ ಉತ್ಪನ್ನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಉತ್ಪಾದಿಸಿ 12ನೇ ಶತಮಾನದ ಬಸವಣ್ಣ ಅವರ ಕನಸು ನನಸು ಮಾಡಬೇಕು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.