ಶ್ರೀನಿವಾಸಪುರ: ಪಟ್ಟಣದ ಎಪಿಎಂಸಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಬುಧವಾರ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಸ್.ಸಿ.ರಮೇಶ್, ಉಪಾಧ್ಯಕ್ಷರಾಗಿ ಜಿ.ಕೆ.ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ಅಧ್ಯಕ್ಷರಾಗಿದ್ದ ಎನ್.ರಾಜೇಂದ್ರ ಪ್ರಸಾದ್ ಹಾಗೂ ಉಪಾಧ್ಯಕ್ಷ ಪೆದ್ದರೆಡ್ಡಿ ಅವರ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲಾಯಿತು.

13 ಸದಸ್ಯರು ಹಾಗೂ ಮೂರು ಮಂದಿ ನಾಮನಿರ್ದೇಶಿತ ಸದಸ್ಯರು ಹಾಜರಿದ್ದರು. ಅಧ್ಯಕ್ಷ ಸ್ಥಾನಕ್ಕೆ ಎಸ್.ಸಿ.ರಮೇಶ್, ಟಿ.ವಿ.ನಾರಾಯಣಸ್ವಾಮಿ, ನಾರಾಯಣಸ್ವಾಮಿ ನಾಮಪತ್ರ ಸಲ್ಲಿಸಿದ್ದರು. ಆದರೆ ಟಿ.ವಿ.ನಾರಾಯಣಸ್ವಾಮಿ, ನಾರಾಯಣಸ್ವಾಮಿ ನಾಮಪತ್ರ ಹಿಂಪಡೆದ ಕಾರಣ ಎಸ್.ಸಿ.ರಮೇಶ್ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷರ ಸ್ಥಾನಕ್ಕೆ ಪೆದ್ದರೆಡ್ಡಿ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಎಪಿಎಂಸಿ ಕಾರ್ಯ ದರ್ಶಿ ಎಂ.ವೇಣುಗೋಪಾಲ್ ಇದ್ದರು.

ಕಾಂಗ್ರೆಸ್ ಮಖಂಡರಾದ ಸಂಜಯ್‌ರೆಡ್ಡಿ, ಎನ್.ರಾಜೇಂದ್ರ ಪ್ರಸಾದ್ ದಿಂಬಾಲ ಅಶೋಕ್, ಮಂಜುನಾಥರೆಡ್ಡಿ, ರೋಣೂರು ಚಂದ್ರಶೇಖರ್, ಕೆ.ಕೆ.ಮಂಜು, ಅಯ್ಯಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.