ಶ್ಯಾಮ್‌ಪ್ರಸಾದ್ ಮುಖರ್ಜಿ ಜಯಂತಿ ಆಚರಣೆ

ಕೋಲಾರ: ‘ಭಾರತೀಯ ಜನಸಂಘದ ಸಂಸ್ಥಾಪಕ ಶ್ಯಾಮ್‌ಪ್ರಸಾದ್ ಮುಖರ್ಜಿ ಅವರು ವೃತ್ತಿಯಲ್ಲಿ ವಕೀಲರಾಗಿ ಸಮಾಜ ಸುಧಾರಣೆಗೆ ದಾರಿದೀಪವಾಗಿದ್ದರು’ ಎಂದು ಬಿಜೆಪಿ ಕಾನೂನು ಪ್ರಕೋಷ್ಠ ರಾಜ್ಯ ಕಾರ್ಯದರ್ಶಿ ಎಸ್.ಕೇಶವಪ್ರಸಾದ್ ಅಭಿಪ್ರಾಯಪಟ್ಟರು.
ಬಿಜೆಪಿ ಕಾನೂನು ಪ್ರಕೋಷ್ಠವು ಇಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶ್ಯಾಮ್‌ಪ್ರಸಾದ್ ಮುಖರ್ಜಿ ಜಯಂತಿಯಲ್ಲಿ ಮಾತನಾಡಿ, ‘ಮುಖರ್ಜಿ ಅವರು ಸ್ವಾತಂತ್ರ್ಯೋತ್ತರದಲ್ಲಿ ಹಿಂದೂಗಳ ಮೇಲಿನ ಶೋಷಣೆ ವಿರುದ್ಧ ಧ್ವನಿ ಎತ್ತಿದರು’ ಎಂದರು.
‘ಮುಖರ್ಜಿ ಅವರ ಪ್ರತಿ ಕಾರ್ಯದಲ್ಲೂ ದೇಶಾಭಿಮಾನ ಎದ್ದು ಕಾಣುತ್ತಿತ್ತು. ದುಷ್ಟ ಶಕ್ತಿಗಳಿಂದ ದೇಶ ವಿಭಜಿಸುವ ಹುನ್ನಾರ ನಡೆದಾಗ ಪ್ರತಿ ಹಂತದಲ್ಲೂ ಪ್ರಬಲವಾಗಿ ವಿರೋಧಿಸುತ್ತಾ ಬಂದರು. ದೇಶದ ಏಕತೆ ಅಖಂಡತೆಗೆ ಅವರಿಗಿದ್ದ ಪ್ರೇಮ, ಕಾಳಜಿಯು ಪ್ರತಿ ಭಾರತೀಯನಿಗೆ ಅವರ ಮೇಲೆ ಅಪಾರ ಗೌರವ ಮೂಡಿಸುತ್ತದೆ’ ಎಂದು ತಿಳಿಸಿದರು.
ಬಿಜೆಪಿ ಕಾನೂನು ಪ್ರಕೋಷ್ಠ ರಾಜ್ಯ ಸಹ ಸಂಚಾಲಕ ಯೋಗನಾಥ್, ರಾಜ್ಯ ಸಮಿತಿ ಸದಸ್ಯ ಶ್ರೀನಿವಾಸ್, ಜಿಲ್ಲಾ ಸಂಚಾಲಕ ವೆಂಕಟರೆಡ್ಡಿ, ಸಹ ಸಂಚಾಲಕ ನಾಗೇಂದ್ರ, ಜಿಲ್ಲಾ ಸರ್ಕಾರಿ ಅಭಿಯೋಜಕ ನಾರಾಯಣಸ್ವಾಮಿ ಪಾಲ್ಗೊಂಡರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.