ಶನಿವಾರ, ಅಕ್ಟೋಬರ್ 1, 2022
23 °C

ಸಿದ್ದರಾಮಯ್ಯಗೆ ಕೋಲಾರದಲ್ಲಿ ಸೋಲಿನ ವಿದಾಯ: ಜೆಡಿಎಸ್ ಎಂಎಲ್‌ಸಿ ಇಂಚರ ಗೋವಿಂದರಾಜು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಸಿದ್ದರಾಮಯ್ಯ ಅವರನ್ನು ಸೋಲಿಸಿ, ವಿದಾಯ ಹೇಳಿ ಕಳುಹಿಸುತ್ತೇವೆ’ ಎಂದು ವಿಧಾನ ಪರಿಷತ್‌ ಸದಸ್ಯ ಜೆಡಿಎಸ್‌ನ ಇಂಚರ ಗೋವಿಂದರಾಜು ಹೇಳಿದರು.

‘75ನೇ ಜನ್ಮದಿನದ ನೆಪದಲ್ಲಿ ದಾವಣಗೆರೆಯಲ್ಲಿ ಆಯೋಜಿರುವುದು ಸಿದ್ದರಾಮಯ್ಯ ಅವರ ರಾಜಕೀಯ ಜೀವನಕ್ಕೆ ವಿದಾಯ ಹೇಳುವ ಸಮಾರಂಭ ಎಂಬುದಾಗಿ ಈಗ ಚರ್ಚೆ ನಡೆಯುತ್ತಿದೆ. ಕೋಲಾರಕ್ಕೆ ಬಂದರೆ ಅವರನ್ನು ಇಲ್ಲಿನ ಜನ ಸೋಲಿಸಿ ಬೀಳ್ಕೊಡುಗೆ ನೀಡಿ ಕಳುಹಿಸುತ್ತಾರೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಜೆಡಿಎಸ್‌ನಿಂದ ಹೊರಗೆ ಹೋಗಿ ಕಾಂಗ್ರೆಸ್‌ ಜೊತೆ ಗುರುತಿಸಿಕೊಂಡಿರುವ ಶಾಸಕ ಕೆ.ಶ್ರೀನಿವಾಸಗೌಡ ಗಂಡಸೇ ಆಗಿದ್ದರೆ ಮುಂದಿನ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಗೆದ್ದು ತೋರಿಸಲಿ’ ಎಂದು ಸವಾಲು ಹಾಕಿದ ಅವರು, ‘ಮತ್ತೆ ಗೆದ್ದರೆ ಅವರ ಮನೆಯ ವಾಚ್‌ಮ್ಯಾನ್‌ ಆಗಿ ಕೆಲಸ ಮಾಡುತ್ತೇನೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು