ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚರ್ಮಗಂಟು ತಡೆ: ಲಸಿಕೆಗೆ ಸೂಚನೆ

ಮುಳಬಾಗಿಲು: 16 ಹಸು ಸಾವು– ರೈತರಿಗೆ ಸಂಕಷ್ಟ
Last Updated 17 ನವೆಂಬರ್ 2022, 6:05 IST
ಅಕ್ಷರ ಗಾತ್ರ

ಮುಳಬಾಗಿಲು: ‘ತಾಲ್ಲೂಕಿನಲ್ಲಿ ಚರ್ಮಗಂಟು ರೋಗಕ್ಕೆ 16 ಹಸುಗಳು ಮೃತಪಟ್ಟಿರುವುದು ಆತಂಕಕಾರಿಯಾಗಿದೆ. ಕೂಡಲೇ, ಎಲ್ಲಾ ಹಸುಗಳಿಗೆ ಲಸಿಕೆ ಹಾಕಲು ಪಶುಪಾಲನಾ ಇಲಾಖೆಯು ಅಗತ್ಯ ಕ್ರಮ ತೆಗೆದುಕೊಳ್ಳಬೇಕು’ ಎಂದು ಶಾಸಕ ಎಚ್. ನಾಗೇಶ್ ಸೂಚಿಸಿದರು.

ನಗರದ ತಾ.ಪಂ. ಸಭಾಂಗಣದಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ರೈತರ ಜೀವನಾಡಿಯಾಗಿರುವ ಹಸುಗಳ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ. ಅವುಗಳ ಆರೋಗ್ಯ ಕಾಪಾಡುವುದು ಅತ್ಯಗತ್ಯ ಎಂದು ತಿಳಿಸಿದರು.

ತಾಲ್ಲೂಕಿನಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಕಡಿಮೆ ಮಾಡಲು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ತಾಲ್ಲೂಕು ಆರೋಗ್ಯಾಕಾರಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು.ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರಬಾರದು ಎಂದರು.

ಖಾಸಗಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಹಾಗೂ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇದಕ್ಕೆ ಕಡಿವಾಣ ಹಾಕಲು ಅಬಕಾರಿ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚಿಸಿದರು.

ಕಳೆದ ಸಾಲಿನಡಿ ತಾಲ್ಲೂಕಿಗೆ ಶೇ 94.85ರಷ್ಟು ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಂದಿದೆ. ಈ ವರ್ಷ ಶೇ 100ರಷ್ಟು ಫಲಿತಾಂಶ ಬರಲು ಶಿಕ್ಷಕರು ಶ್ರಮಿಸಬೇಕು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ವಿಶೇಷ ತರಗತಿ ನಡೆಸಲು ಕ್ರಮ ತೆಗೆದುಕೊಳ್ಳಬೇಕೆಂದು ಬಿಇಒಗೆ ತಿಳಿಸಿದರು.

ಶಾಲಾ ಕೊಠಡಿಗಳ ದುರಸ್ತಿಗೆ ₹ 2 ಕೋಟಿ ಅನುದಾನ ಬಿಡುಗಡೆಯಾಗಿದೆ. ಶಿಕ್ಷಣ ಇಲಾಖೆ ಹಾಗೂ ಜಿ.ಪಂ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದರು.

ಸಭೆಯಲ್ಲಿ ಜಿ.ಪಂ. ಉಪ ಕಾರ್ಯದರ್ಶಿ ಲಕ್ಷ್ಮೀ, ತಾ.ಪಂ. ಇಒ ಡಾ.ಕೆ. ಸರ್ವೇಶ್, ನಗರಸಭೆ ಪೌರಾಯುಕ್ತೆ ಸುಮತಿ, ನರೇಗಾ ಸಹಾಯಕ ನಿರ್ದೇಶಕ ರವಿಚಂದ್ರ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT