ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗ್ನೇಯ ಶಿಕ್ಷಕರ ಕ್ಷೇತ್ರ: ಕೋಲಾರದಲ್ಲಿ ಶೇ 95.82 ಮತದಾನ

Published 3 ಜೂನ್ 2024, 13:01 IST
Last Updated 3 ಜೂನ್ 2024, 13:01 IST
ಅಕ್ಷರ ಗಾತ್ರ

ಕೋಲಾರ: ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಸೋಮವಾರ ನಡೆದ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯಲ್ಲಿ ಶೇ 95.82ರಷ್ಟು ಮತದಾನವಾಗಿದೆ.

ಜಿಲ್ಲೆಯ ಆರು ತಾಲ್ಲೂಕಿನ ಏಳು ಮತಗಟ್ಟೆಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಶಾಂತಿಯುವಾಗಿ ಮತದಾನ ನಡೆಯಿತು.

ಜಿಲ್ಲೆಯಲ್ಲಿ 2,392 ಪುರುಷರು, 2,158 ಮಹಿಳೆಯರು ಸೇರಿದಂತೆ ಒಟ್ಟು 4,550 ಶಿಕ್ಷಕ ಮತದಾರರು ನೋಂದಾಯಿಸಿಕೊಂಡಿದ್ದರು. ಅವರಲ್ಲಿ 2,297 ಪುರುಷರು, 2,063 ಮಹಿಳೆಯರು ಸೇರಿದಂತೆ ಒಟ್ಟು 4,360 ಮಂದಿ ಮತದಾನ ಮಾಡಿದರು.

ಮಾಲೂರು ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಂದರೆ ಶೇ 98.29ರಷ್ಟು ಮತದಾನವಾಗಿದೆ. ಕೋಲಾರ ತಾಲ್ಲೂಕಿನಲ್ಲಿ ಅತಿ ಕಡಿಮೆ (ಶೇ 92.95) ಮತದಾನ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT