ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಜಿಎಫ್: ಎಸ್‌.ಪಿ ಕಚೇರಿ ಸ್ಥಳಾಂತರ

Last Updated 5 ಆಗಸ್ಟ್ 2021, 2:13 IST
ಅಕ್ಷರ ಗಾತ್ರ

ಕೆಜಿಎಫ್: ಜಿಲ್ಲಾ ಪೊಲೀಸ್ ಕಚೇರಿಯನ್ನು ನಗರದಿಂದ ಬೇರೆಡೆಗೆ ಸ್ಥಳಾಂತರ ಮಾಡುವ ಸಂಬಂಧ ಹಲವಾರು ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗುತ್ತಿದ್ದರೂ, ಪೊಲೀಸ್ ಇಲಾಖೆ ಇದುವರೆವಿಗೂ ಈ ಬಗ್ಗೆ ಚಕಾರ ಎತ್ತದಿರುವುದರಿಂದ ಸ್ಥಳಾಂತರ ಖಚಿತ ಎಂಬ ಭಾವನೆ ಮೂಡಿದೆ.

ಸ್ವಾತಂತ್ರ್ಯಪೂರ್ವದಲ್ಲಿ ಚಿನ್ನದ ಗಣಿಯಲ್ಲಿ ಆಗುತ್ತಿದ್ದ ಕಳ್ಳತನ ತಡೆಗಟ್ಟಲು ವ್ಯವಸ್ಥಿತ ರೀತಿಯಲ್ಲಿ ಪೊಲೀಸ್ ಪಡೆ ರಚಿಸಿದ್ದರು. ಅದಕ್ಕೆ ಸೂಪರಿಟೆಂಡೆಂಟ್ ಆಫ್ ಪೊಲೀಸ್ ಹುದ್ದೆ ಸೃಷ್ಟಿಸಿದ್ದರು. ಸ್ವಾತಂತ್ರ್ಯ ನಂತರ ಕೂಡ ಅದೇ ಹುದ್ದೆ ರಾಜ್ಯ ಸರ್ಕಾರದ ಅಧೀನದಲ್ಲಿ ಮುಂದುವರಿಯಿತು.

ಹಲವು ಸಂಘಟನೆಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಶಾಸಕಿ ಎಂ. ರೂಪಕಲಾ ಈ ಬಗ್ಗೆ ಸ್ಪಷ್ಟೀಕರಣ ನೀಡಿ, ಇಂತಹ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ.‌ ಮಾಜಿ ಶಾಸಕ ಎಸ್. ರಾಜೇಂದ್ರನ್ ಪ್ರತಿಭಟನೆ ಕೈಗೊಳ್ಳು ವುದಾಗಿ ಎಚ್ಚರಿಕೆ ನೀಡಿದ್ದಾರೆ.

7ರಂದು ಬಂದ್‌

ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಕಚೇರಿಯನ್ನು ಬೇರೆಡೆಗೆ ವರ್ಗಾವಣೆ ಮಾಡಲು ಸರ್ಕಾರ ಮುಂದಾಗಿದೆ. ಕೂಡಲೇ ಪ್ರಕ್ರಿಯೆಯನ್ನು ಕೂಡಲೇ ಕೈಬಿಡದೆ ಇದ್ದರೆ ಆಗಸ್ಟ್‌ 7ರಂದು ಕೆಜಿಎಫ್ ಬಂದ್ ಆಚರಣೆ ಮಾಡುವುದಾಗಿ ಘೋಷಿಸಿದ್ದಾರೆ. ಬೆಳಿಗ್ಗೆ 6 ರಿಂದ ಸಂಜೆ 5ವರೆವಿಗೂ ಬಂದ್ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT