ಮಂಗಳವಾರ, ಸೆಪ್ಟೆಂಬರ್ 22, 2020
22 °C

ಶಿಕ್ಷಣದಷ್ಟೇ ಕ್ರೀಡೆ ಮುಖ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ವಿದ್ಯಾರ್ಥಿಗಳು ನಿರಂತರವಾಗಿ ಶಾಲೆಗೆ ಬರಬೇಕು. ಶಾಲೆ, ತರಗತಿ ಹಾಗೂ ವೈಯುಕ್ತಿಕ ಸ್ವಚ್ಛತೆಗೆ ಹೆಚ್ಚು ಗಮನಹರಿಸಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು’ ಎಂದು ಪ್ರೇರಣಾ ಕಾರ್ಯಕ್ರಮದ ಜಿಲ್ಲಾ ಉಸ್ತುವಾರಿ ಅಧಿಕಾರಿ ಆರ್.ಸುಬ್ರಮಣಿ ಕಿವಿಮಾತು ಹೇಳಿದರು.

ತಾಲ್ಲೂಕಿನ ಹರಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಪ್ರೇರಣಾ ಕಾರ್ಯಕ್ರಮದ ಪ್ರಗತಿ ಪರಿಶೀಲಿಸಿ ಮಾತನಾಡಿ, ‘ವಿದ್ಯಾರ್ಥಿಗಳಿಗೆ ಶಿಕ್ಷಣದಷ್ಟೇ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಮುಖ್ಯ’ ಎಂದು ತಿಳಿಸಿದರು.

‘ಸುಮೇರು, ಸುವೇಗ, ರೈನ್ ಬೋ ಅಭ್ಯಾಸ ಪುಸ್ತಕಗಳನ್ನು ಅಭ್ಯಾಸ ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಸಹಕಾರ ಮನೋಭಾವ ಬೆಳೆಯುತ್ತದೆ. ಜತೆಗೆ ಜವಾಬ್ದಾರಿ ಹಂಚಿಕೆ, ನಿರ್ವಹಣೆ ಹಾಗೂ ನಾಯಕತ್ವ ಗುಣ ಬೆಳೆಸಬಹುದು’ ಎಂದು ಸಲಹೆ ನೀಡಿದರು.

‘ಪ್ರೇರಣಾ ಕಾರ್ಯಕ್ರಮದಿಂದ ಸಹಕಾರ ಮನೋಭಾವ, ನಿರ್ಭಯ ವಾತಾವರಣ ಸುಲಭವಾದ ಕಲಿಕೆ ಪಡೆಯಬಹುದು. ಪ್ರತಿಯೊಬ್ಬ ವಿದ್ಯಾರ್ಥಿಯು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದು ಸಂತಸದ ವಿಚಾರ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಹಿಂದಿನ ವರ್ಷದಂತೆಯೇ ಈ ವರ್ಷವೂ ಶಿಕ್ಷಣ ಪ್ರತಿಷ್ಠಾನದ ಮೂಲಕ ಜಿಲ್ಲೆಯ ಎಲ್ಲಾ ಶಾಲೆಗಳಲ್ಲೂ ಪ್ರೇರಣಾ ಕಾರ್ಯಕ್ರಮ ಜಾರಿಯಾಗಿದೆ. 15 ದಿನಗಳಲ್ಲಿ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ ನಂತರ ಜಿಲ್ಲಾ ಹಂತದಲ್ಲೂ ಜಾರಿಗೊಳಿಸಲಾಗುತ್ತದೆ’ ಎಂದು ವಿವರಿಸಿದರು.

ಹರಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಜಿ.ಶ್ರೀನಿವಾಸ್, ಸಮೂಹ ಸಂಪನ್ಮೂಲ ವ್ಯಕ್ತಿ ಗಂಗಾಧರ್, ಶಿಕ್ಷಕರಾದ ಪಿ.ಎಂ.ಗೋವಿಂದಪ್ಪ, ಆರ್.ಮಂಜುಳಾ, ಎಚ್.ಮುನಿಯಪ್ಪ, ಕೆ.ಮಮತಾ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.