ಮಂಗಳವಾರ, ಅಕ್ಟೋಬರ್ 22, 2019
21 °C

ನ.4ಕ್ಕೆ ಮಂಗಳೂರಿನಲ್ಲಿ ಕ್ರೀಡಾಕೂಟ

Published:
Updated:

ಕೋಲಾರ: ‘ಅಸೋಸಿಯೇಷನ್ ವತಿಯಿಂದ ಮಂಗಳೂರಿನಲ್ಲಿ ನ.4 ಮತ್ತು 5ರಂದು ರಾಜ್ಯ ಮಟ್ಟದ ಪ್ರಥಮ ಕ್ರೀಡಾಕೂಟ ಆಯೋಜಿಸಲಾಗಿದೆ’ ಎಂದು ರಾಜ್ಯ ಮಾಸ್ಟರ್ ಗೇಮ್ಸ್ ಅಸೋಸಿಯೇಷನ್‌ ಜಂಟಿ ಕಾರ್ಯದರ್ಶಿ ಎಚ್.ಜಗನ್ನಾಥನ್ ತಿಳಿಸಿದರು.

ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘30 ವರ್ಷಕ್ಕಿಂತ ಮೇಲಿನ ಮಹಿಳೆಯರು ಮತ್ತು ಪುರುಷರಿಗೆ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದ್ದು, ಆಸಕ್ತರು ಭಾಗವಹಿಸಬಹುದು’ ಎಂದರು.

‘ಅಥ್ಲೆಟಿಕ್ಸ್, ಬ್ಯಾಡ್‍ಮಿಂಟನ್, ವಾಲಿಬಾಲ್, ಬಾಸ್ಕೆಟ್‌ ಬಾಲ್‌, ಫುಟ್ಬಾಲ್‌, ಟೇಬಲ್‌ ಟೆನ್ನಿಸ್‌, ಈಜು, ಹ್ಯಾಂಡ್‌ ಬಾಲ್, ಜೂಡೋ ಸ್ಪರ್ಧೆ ನಡೆಯಲಿವೆ. ನಂತರ ಕ್ರೀಡಾಪಟುಗಳನ್ನು ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ ಮಾಡಲಾಗುತ್ತದೆ. ಕೋಲಾರ ಜಿಲ್ಲೆಯಿಂದ ಭಾಗವಹಿಸುವ ಕ್ರೀಡಾಪಟುಗಳು ಅ.20ರೊಳಗೆ ಹೆಸರು ನೋಂದಾಯಿಸಬೇಕು’ ಎಂದು ಹೇಳಿದರು.

‘ವಿಶೇಷವಾಗಿ ಅಥ್ಲೆಟಿಕ್ಸ್‌ನಲ್ಲಿ ಭಾಗವಹಿಸುವ ಬಿಪಿಎಲ್ ಕಾರ್ಡ್ ಹೊಂದಿರುವ ಕ್ರೀಡಾಪಟುಗಳಿಗೆ ನೋಂದಣಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗುವುದು. ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ನೇರ ನೋಂದಣಿಗೆ ಅವಕಾಶವಿಲ್ಲ. ಆಸಕ್ತ ಕ್ರೀಡಾಪಟುಗಳು ಹೆಚ್ಚಿನ ಮಾಹಿತಿಗೆ 8951515979, 7338622734 ಅಥವಾ 9448005849 ಮೊಬೈಲ್‌ ಸಂಖ್ಯೆ ಸಂಪರ್ಕಿಸಬಹುದು’ ಎಂದು ವಿವರಿಸಿದರು.

ಅಸೋಸಿಯೇಷನ್ ಜಿಲ್ಲಾ ಘಟಕದ ಕಾರ್ಯದರ್ಶಿ ಸಿ.ರಾಜೇಶ್‌ಬಾಬು, ನಿರ್ದೇಶಕ ಅಶ್ವತ್ಥ್‌, ಬಂಗಾರಪೇಟೆ ತಾಲ್ಲೂಕು ಘಟಕದ ನಿರ್ದೇಶಕ ಮದಿಅಳಗನ್, ಕೆಜಿಎಫ್ ತಾಲ್ಲೂಕು ಘಟಕದ ನಿರ್ದೇಶಕ ಸಂಪತ್ ಹಾಜರಿದ್ದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)