ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲದ ಗುಂಡಿಯೊಳಗೆ ಮಕ್ಕಳನ್ನು ಇಳಿಸಿದ ಕೇಸ್: ಪ್ರಾಂಶುಪಾಲ,ವಾರ್ಡನ್,ಶಿಕ್ಷಕ ಅಮಾನತು

ಅಮಾನತು ಆದೇಶದಲ್ಲಿ 'ಪ್ರಜಾವಾಣಿ' ವರದಿ ಉಲ್ಲೇಖ
Published 17 ಡಿಸೆಂಬರ್ 2023, 7:50 IST
Last Updated 17 ಡಿಸೆಂಬರ್ 2023, 7:50 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಮಾಲೂರು ತಾಲ್ಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲರಾದ ಭಾರತಮ್ಮ, ವಾರ್ಡನ್ ಮಂಜುನಾಥ್ ಹಾಗೂ ಶಿಕ್ಷಕ ಮುನಿಯಪ್ಪ ಅವರನ್ನು ಅಮಾನತು ಮಾಡಲಾಗಿದೆ.

'ಇದೊಂದು ತೀರಾ ಗಂಭೀರವಾದ ವಿಚಾರ. ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರು ದೊಡ್ಡ ಲೋಪ ಎಸಗಿದ್ದಾರೆ. ಹೀಗಾಗಿ, ಅಮಾನತುಗೊಳಿಸಿ ತನಿಖೆ ನಡೆಸಲು ನಿರ್ದೇಶನ ನೀಡಿದ್ದೇನೆ' ಎಂದು ಸಮಾಜ ಕಲ್ಯಾಣ ಸಚಿವ ಡಾ‌.ಎಚ್.ಸಿ.ಮಹದೇವಪ್ಪ 'ಪ್ರಜಾವಾಣಿ 'ಗೆ ದೂರವಾಣಿ ಮೂಲಕ ಮಾಹಿತಿ ನೀಡಿದರು.

'ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಿದ್ದೇನೆ' ಎಂದರು.

ಇತ್ತ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ನವೀನ್ ಕುಮಾರ್ ರಾಜ್, ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ 'ಪ್ರಜಾವಾಣಿ'ಯಲ್ಲಿ ಬಂದ ವರದಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT