ಬುಧವಾರ, ಮೇ 27, 2020
27 °C

ಬೈಕ್‌ ಮೇಲೆ ಅಪಾಯಕಾರಿ ಪ್ರಯಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಪೊಲೀಸರ ಕಣ್ಣು ತಪ್ಪಿಸಿ ದ್ವಿಚಕ್ರ ವಾಹನಗಳ ಮೇಲೆ ಇಬ್ಬರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುವುದು ಸಾಮಾನ್ಯವಾಗಿದೆ. ಲಾಕ್ ಡೌನ್‌ ಪ್ರಾರಂಭವಾದ ನಂತರ ಈ ಪರಿಸ್ಥಿತಿ ನಿರ್ಮಾಣವಾಗಿದೆ.

ಇತ್ತಿಚೆಗಷ್ಟೇ ಪಟ್ಟಣದ ಹೊರ ವಲಯದಲ್ಲಿ ನಾಲ್ಕು ಜನರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್‌ ಸವಾರರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಅದರಲ್ಲೂ ನಿಯಮಬಾಹಿರವಾಗಿ ಬೈಕ್‌ ಮೇಲೆ ಪ್ರಯಾಣಿಸುವ ವ್ಯಕ್ತಿಗಳು ಬಿದ್ದು ಗಾಯಗೊಳ್ಳುವ ಪ್ರಕರಣಗಳು ಹೆಚ್ಚುತ್ತಿವೆ. ಪೊಲೀಸರ ಕಣ್ಣು ತಪ್ಪಿಸಲು ಮುಖ್ಯ ರಸ್ತೆ ಬಿಟ್ಟು ಗ್ರಾಮೀಣ ರಸ್ತೆಗಳಲ್ಲಿ ಸಂಚರಿಸುವುದು ಹೆಚ್ಚಿದೆ.

ಬೇರೆ ಊರುಗಳಿಗೆ ಹೋಗುವವರು, ಗಡಿದಾಟಿ ಬೇರೆ ರಾಜ್ಯಗಳಿಗೆ ಹೋಗಬೇಕಾದವರೂ ದ್ವಿಚಕ್ರ ವಾಹನಗಳನ್ನು ಅವಲಂಬಿಸಿದ್ದಾರೆ. ಮಿತಿ ಮೀರಿ ವಾಹನಗಳ ಮೇಲೆ ಪ್ರಯಾಣಿಸುವುದು ಕಾನೂನು ಬಾಹಿರ ಎಂಬ ಅರಿವಿನ ಕೊರತೆ ಇಲ್ಲದಿದ್ದರೂ, ಸಂದರ್ಭ ಅಂಥ ಪರಿಸ್ಥಿತಿಗೆ ದೂಡಿದೆ ಎನ್ನುತ್ತಾರೆ ಪ್ರಯಾಣಿಕರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.