ಶ್ರೀನಿವಾಸಪುರ: ತಾಲ್ಲೂಕಿನ ಗೌನಿಪಲ್ಲಿ ಗ್ರಾಮ ಪಂಚಾಯಿತಿ, ರಾಯಲ್ಪಾಡು, ನೆಲವಂಕಿ, ಲಕ್ಷ್ಮಿಪುರ ಹಾಗೂ ತಾಡಿಗೋಳ್ ಕ್ರಾಸ್ ಗ್ರಾಮ ಪಂಚಾಯಿತಿಗಳಲ್ಲಿ ಶುಕ್ರವಾರ ಸ್ವಚ್ಛತಾ ಆಂದೋಲನಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ನೇತೃತ್ವದಲ್ಲಿ ಚಾಲನೆ ನೀಡಿದರು.

ಪರಿಸರವನ್ನು ಕಾಪಾಡದಿದ್ದರೆ ಮಕ್ಕಳಿಗೆ ವಿಷ ನೀಡಿದಂತೆ. ಹೀಗಾಗಿ, ಸ್ವಚ್ಛ, ಶುದ್ಧ ಪರಿಸರ ಹೊಂದಬೇಕು. ಗ್ರಾಮಗಳಲ್ಲಿ ನೈರ್ಮಲ್ಯ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ. ಪಂಚಾಯಿತಿ ಮಟ್ಟದಲ್ಲಿ ಸ್ವಚ್ಛತಾ ಕಾರ್ಯಕ್ರಮಗಳು ಕೇವಲ ಸಾಂಕೇತಿಕವಾಗದೆ, ನಿರಂತರವಾಗಿ ನಡೆಯಬೇಕು ಎಂದು ಅವರು ಸೂಚಿಸಿದರು.

ತಾಲ್ಲೂಕಿನ ಬಹುತೇಕ ಗ್ರಾಮಗಳಿಗೆ ಖುದ್ದು ಭೇಟಿ ನೀಡಿದ್ದು, ಅಲ್ಲಿನ ಸಮಸ್ಯೆಗಳನ್ನು ಹತ್ತಿರದಿಂದ ಗಮನಿಸಿದ್ದೇನೆ ಎಂದರು.

ಗ್ರಾಮಗಳಲ್ಲಿ ಕಂಡುಬಂದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ಸಂಬಂಧಪಟ್ಟ ಸಿಬ್ಬಂದಿ ಹಾಗೂ ಅಧಿಕಾರಿಗಳ ಮೇಲೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ಅಧಿಕಾರಿಗಳು ಕಾನೂನು ಚೌಕಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಹಳ್ಳಿಯ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಬೇಕು. ಆಡಳಿತ ಯಂತ್ರವು ಜನಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ ಮಾತನಾಡಿ, ‘ಸರ್ಕಾರದ ಜೊತೆಗೆ ಸಾರ್ವಜನಿಕರು ಭಾಗಿಯಾದಾಗ ಮಾತ್ರ ಅಭಿವೃದ್ಧಿ ಮಾಡಲು ಸಾಧ್ಯ. ಇದೇ ಮೊದಲ ಬಾರಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳು ತೆರಿಗೆ ಸಂಗ್ರಹಣೆಯಲ್ಲಿ ಶೇ 100 ರಷ್ಟು ಪ್ರಗತಿ ಸಾಧಿಸಲಾಗಿದೆ. ನರೇಗಾ ಯೋಜನೆಯಡಿಯಲ್ಲಿ ಶೇ 100 ಮಾನವ ದಿನಗಳ ಪ್ರಗತಿ ಸಾಧಿಸಲಾಗಿದೆ’ ಎಂದರು.

ಪ್ರತಿ ಗ್ರಾಮಗಳ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಈ ಕುರಿತು ಅರಿವು ಮೂಡಿಸಲಾಗುತ್ತಿದೆ. ಪ್ರತಿ ಸ್ವಚ್ಛತಾ ವಾಹಿನಿಗೆ ಜಿಪಿಎ ಟ್ರ್ಯಾಕರ್ ಅಳವಡಿಸಿದ್ದು, ಕಚೇರಿಯಲ್ಲೇ ಕುಳಿತು, ಕಸ ಸಂಗ್ರಹಣೆಯನ್ನು ನಿರ್ವಹಣೆ ಮಾಡಲಾಗುತ್ತಿದೆ. ಕಸ ಸಂಗ್ರಹಕ್ಕೆ ನಿರ್ಲಕ್ಷ್ಯ ವಹಿಸುವ ಆಧಿಕಾರಿಗಳ ವಿರದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ ಎಲ್ಲಾ ಕೆರೆಗಳ ಸರ್ವೆ ಮಾಡಲಾಗಿದೆ. ಒತ್ತುವರಿ ಆಗಿರುವುದನ್ನು ತೆರವುಗೊಳಿಸಲಾಗಿದೆ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಇಒ ಸರ್ವೇಶ್ ಮಾತನಾಡಿ, ‘ನಿತ್ಯ ಗ್ರಾಮಗಳಲ್ಲಿ ಕಸ ಸಂಗ್ರಹಣೆ ಮಾಡಬೇಕು. ಶುದ್ಧ ಕುಡಿಯುವ ನೀರನ್ನು ಎಲ್ಲರಿಗೂ ಕಲ್ಪಿಸುವ ಉದ್ದೇಶದಿಂದ ಪ್ರತಿ ಗ್ರಾಮಕ್ಕೂ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಸಲಾಗಿದೆ, ದುರಸ್ತಿ ಮಾಡಲಾಗಿದೆ. ಚರಂಡಿಗಳ ಸ್ಚಚ್ಛತೆಗಾಗಿ ಇಂಗು ಗುಂಡಿಗಳನ್ನು ಕಾರ್ಯಗತಗೊಳಿಸಲಾಗಿದೆ’ ಎಂದರು.

ವಿವಿಧ ಗ್ರಾಮಪಂಚಾಯಿತಿಗಳ ವ್ಯಾಪ್ತಿಯ ರಸ್ತೆ, ಸಾರ್ವಜನಿಕ ಪ್ರದೇಶಗಳಲ್ಲಿ ಸ್ವಚ್ಛತೆ ಕೈಗೊಂಡು ಸಾರ್ವಜನಿಕರಿಗೆ, ವ್ಯಾಪ್ಯಾರಿಗಳಿಗೆ ಸ್ವಚ್ಛತೆ ಅರಿವು ಮೂಡಿಸಲಾಯಿತು.

ಜಿಲ್ಲಾಧಿಕಾರಿ ಎಂ.ಆರ್.ರವಿ, ಜಿಲ್ಲಾ ಲೋಕಾಯುಕ್ತ ಅಧೀಕ್ಷಕ ಆ್ಯಂಟೋನಿ ಜಾನ್, ನ್ಯಾಯಮೂರ್ತಿ ಅರವಿಂದ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್, ಶ್ರೀನಿವಾಸಪುರ ಪುರಸಭೆ ಮುಖ್ಯಾಧಿಕಾರಿ ವಿ.ನಾಗರಾಜ್, ವಾಟರ್ಬೋರ್ಡ್ ಎಇಇ ಸುರೇಶ್, ಪಿಡಬ್ಲುಡಿ ಎಇಇ ಮಂಜುನಾಥ್, ಕೃಷಿ ಅಧಿಕಾರಿ ಕೆ.ಮಹೇಶ್, ಅಬಕಾರಿ ನಿರೀಕ್ಷಕಿ ಪುಷ್ಪಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ನರೇಗಾ ಸಿಬ್ಬಂದಿ, ವಿವಿಧ ಗ್ರಾಮ ಪಂಚಾಯಿತಿಗಳ ಸಿಬ್ಬಂದಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-18-1336268793

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.