ಶ್ರೀನಿವಾಸಪುರ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ವೃತ್ತ ನಿರೀಕ್ಷಕ ಬಿ.ಶಂಕರಾಚಾರ್ಯ ಅಧ್ಯಕ್ಷತೆಯಲ್ಲಿ ದಲಿತರ ಕುಂದುಕೊರತೆ ಸಭೆ ಮಂಗಳವಾರ ನಡೆಯಿತು.

ಈ ವೇಳೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಯಿತು. ದಲಿತ ಮುಖಂಡರು ಅನೇಕ ಸಮಸ್ಯೆಗಳನ್ನು ಪ್ರಸ್ತಾಪಿಸಿದರು. ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟಲು ಪೊಲೀಸ್ ಠಾಣೆ ಮಟ್ಟದಲ್ಲಿ ಸಭೆ ನಡೆಸಬೇಕು. ಶ್ರೀನಿವಾಸಪುರ ವ್ಯಾಪ್ತಿಯನ್ನು ಜೂಜಾಟದಿಂದ ಮುಕ್ತಗೊಳಿಸಬೇಕೆಂದು ಒತ್ತಾಯಿಸಿದರು.

ದಲಿತ ಮುಖಂಡರ ಸಮಸ್ಯೆ ಆಲಿಸಿದ ಪೋಲಿಸ್ ವೃತ್ತ ನಿರೀಕ್ಷಕ ಬಿ.ಶಂಕರಾಚಾರ್ಯ ಮಾತನಾಡಿ, ಇನ್ನು ಮುಂದೆ ಪ್ರತಿ ತಿಂಗಳು ಸಭೆ ನಡೆಸುತ್ತೇವೆ. ಶ್ರೀನಿವಾಸಪುರ ವ್ಯಾಪ್ತಿಯಲ್ಲಿ ಜೂಜಾಟ ಹಾವಳಿಯಿಂದ ಮುಕ್ತಗೊಳಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ. ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟುವುದಕ್ಕೆ ಕ್ರಮ ಕೈಗೊಳ್ಳುತ್ತೇವೆ. ಜೊತೆಗೆ ಸಭೆಯಲ್ಲಿ ಚರ್ಚೆಯಾದ ಹಲವು ವಿಷಯಗಳ ಬಗ್ಗೆ ಹೆಚ್ಚಿನ ಗಮನ ಹರಿಸುತ್ತೇವೆ ಎಂದು ತಿಳಿಸಿದರು.

ಪಿಎಸ್ಐ ಎಚ್.ಜಯರಾಮ್, ಕಾನ್ಸ್ಟೆಬಲ್ ರಮೇಶ್ ಬಾಬು, ಎಸ್.ಬಿ.ರಾಜೇಶ್, ದಲಿತ ಮುಖಂಡರಾದ ರಾಮಂಜಮ್ಮ, ನಾಗದೇನಳ್ಳಿ ವೆಂಕಟರಮಣಪ್ಪ, ಹೂವಳ್ಳಿ ಕೃಷ್ಣಪ್ಪ, ಕಲ್ಲೂರು ವೆಂಕಟೇಶ್, ಉಪ್ಪರಪಲ್ಲಿ ಚಲಪತಿ, ಲಕ್ಷ್ಮಿಪುರ ಕೃಷ್ಣಪ್ಪ, ನವೀನ್ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-18-104695413

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.