ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಸರ್ವೇಶ್ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾಲ್ಲೂಕಿನಲ್ಲಿ ಒಟ್ಟು 245 ಶುದ್ಧ ಕುಡಿಯುವ ನೀರು ಘಟಕಗಳಿದ್ದು, 216 ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. ಉಳಿದ 29 ಘಟಕಗಳಿಗೆ ದುರಸ್ತಿ ಅಗತ್ಯವಿದ್ದು, ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ ಎಂದರು.

ಬೇಸಿಗೆಯಲ್ಲಿ ತಾಲ್ಲೂಕಿನ ಜನರಿಗೆ ಕುಡಿಯುವ ನೀರು ಪೂರೈಸಲು ಅಗತ್ಯವಾದ ಅನುದಾನಕ್ಕಾಗಿ ಸಂಬಂಧಪಟ್ಟ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ತಾಲ್ಲೂಕಿನಲ್ಲಿ 18 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸಬಹುದೆಂದು ನಿರೀಕ್ಷಿಸಲಾಗಿದೆ. ಆ ಗ್ರಾಮಗಳಿಗೆ ನೀರಿನ ಸೌಲಭ್ಯ ಕಲ್ಪಿಸಲು ಈಗಾಗಲೇ ಖಾಸಗಿ ಕೊಳವೆಬಾವಿ ಹೊಂದಿರುವ ಮಾಲೀಕರು ಹಾಗೂ ಆ ಗ್ರಾಮಗಳ ವ್ಯಾಪ್ತಿಯಲ್ಲಿ ನೀರು ಸರಬರಾಜು ಮಾಡುವ ಟ್ಯಾಂಕರ್ ಮಾಲೀಕರನ್ನು ಗುರುತಿಸಲಾಗಿದೆ ಎಂದರು ಹೇಳಿದರು.

ನೀರಿನ ಸಮಸ್ಯೆ ಬಗ್ಗೆ ಮಾಹಿತಿ ಸಂಗ್ರಹಿಸಲು ಮೂವರು ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-18-85284693

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.