ಶ್ರೀನಿವಾಸಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ಭಾರತೀಯ ಕಮ್ಯುನಿಷ್ಟ್ ಪಕ್ಷದ (ಸಿಪಿಎಂ) ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಕೈಯಲ್ಲಿ ಕೆಂಪು ಬಾವುಟ ಹಾಗೂ ಭಿತ್ತಿಪತ್ರ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ಸಿಪಿಎಂ ರಾಜ್ಯಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಮಾತನಾಡಿ, 2014ರಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಿದಾಗಲೂ ದೇಶದಲ್ಲಿ ಪೆಟ್ರೋಲ್ ಬೆಲೆ ₹70 ದಾಟಿರಲಿಲ್ಲ. ಆದರೆ, ಇಂದು ಕಚ್ಚಾ ತೈಲದ ಬೆಲೆ ಕಡಿಮೆಯಿದ್ದರೂ ಪೆಟ್ರೋಲ್ ಬೆಲೆ ಏರಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ಕುಸಿಯುತ್ತಿರುವುದಕ್ಕೆ ಪ್ರಧಾನಿ ಮೋದಿ ಅವರ ಆಡಳಿತ ವೈಫಲ್ಯವೇ ಕಾರಣ ಎಂದು ದೂರಿದ್ದಾರೆ.

ಪಂಚ ರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರಗಳನ್ನು ಏಕಾಏಕಿ ಹೆಚ್ಚಿಸಲಾಗಿದೆ. ಇದು ಜನಸಾಮಾನ್ಯರಿಗೆ ಹೊರೆಯಾಗಿದೆ. ಹಾಗಾಗಿ ತೈಲ ಬೆಲೆಯನ್ನು ತಕ್ಷಣವೇ ಇಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಾರ್ಯಕರ್ತರು ಸೇರಿದಂತೆ ಇತರರು ಇದ್ದರು.

ಪ್ರತಿಭಟನಕಾರರನ್ನು ಉದ್ದೇಶಿಸಿ ಸಿಪಿಎಂ ತಾಲ್ಲೂಕು ಕಾರ್ಯದರ್ಶಿ ಎನ್.ಎನ್.ಶ್ರೀರಾಮ್ ಮಾತನಾಡಿ, ‘ಡೀಸೆಲ್, ಪೆಟ್ರೋಲ್ ಬಹಳಷ್ಟು ದಾಸ್ತಾನಿದೆ, ಜನ ಗಾಬರಿಗೊಳ್ಳಬೇಡಿ ಎಂದು ಪಂಚ ರಾಜ್ಯಗಳ ಚುನಾವಣೆ ವೇಳೆ ಹೇಳುತ್ತಿದ್ದ ಮೋದಿ ಸರ್ಕಾರ, ಫಲಿತಾಂಶ ಬಂದೊಡನೆಯೇ ಎರಡು ಬಾರಿ ತೈಲ ದರ ಏರಿಸಿ ಜನರ ಬೆನ್ನು ಮುರಿಯುವ ಕೆಲಸ ಮಾಡಿದೆ. ಇದಕ್ಕಿಂತ ದೊಡ್ಡ ಜನವಿರೋಧಿ ನಡೆ ಬೇರೆ ಇಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅನೇಕ ದೇಶಗಳು ತಮ್ಮ ನಾಗರಿಕರ ಹಿತರಕ್ಷಣೆಗಾಗಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ನಿಯಂತ್ರಣ ಕ್ರಮ ಕೈಗೊಂಡಿವೆ. ಆದರೆ, ಭಾರತದಲ್ಲಿ ಅಂತಹ ಕ್ರಮ ಕೈಗೊಳ್ಳದೆ, ದುಡಿಯುವ ಜನರ ಮತ್ತು ಜನಸಾಮಾನ್ಯರ ಬದುಕಿನ ಮೇಲೆ ಹೊರೆ ಹೆಚ್ಚಿಸುವುದೇ ಕೇಂದ್ರದ ಬಿಜೆಪಿ ನೇತೃತ್ವದ ಮೋದಿ ಸರ್ಕಾರದ ಉದ್ದೇಶವಾಗಿದೆ. ಜನಹಿತಕ್ಕಿಂತ ಬಿಜೆಪಿಗೆ ಮತ್ತೆ ಮತ್ತೆ ಚುನಾವಣೆ ಗೆಲ್ಲುವುದೇ ಮುಖ್ಯ ಎಂಬುದು ಮತ್ತೊಮ್ಮೆ ರುಜುವಾತಾಗಿದೆ’ ಎಂದು ಆರೋಪಿಸಿದರು.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನೀಟ್ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮಾಮೂಲಿ ಎಂಬಂತಾಗಿದೆ. ಇದಕ್ಕೆ ಕೆಲವು ಶಿಕ್ಷಣ ಸಂಸ್ಥೆಗಳೊಂದಿಗೆ ಬಿಜೆಪಿಯು ಶಾಮೀಲಾಗಿರುವುದು ಕಾರಣವಾಗಿದೆ. ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ಅವರನ್ನು ವಜಾ ಮಾಡಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ರಸಗೊಬ್ಬರದ ಬೆಲೆಯನ್ನು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿ, ರಸಗೊಬ್ಬರ ಪಡೆಯಲು ಫ್ರುಟ್ಸ್ ಐಡಿ ಕಡ್ಡಾಯ ಮಾಡಿ ಪ್ರತಿ ಎಕರೆಗೆ 2 ಮೂಟೆ ನೀಡುತ್ತಿರುವುದನ್ನು ಅವರು ಟೀಕಿಸಿದರು. ರೈತರಿಗೆ ಅಗತ್ಯ ಇರುವಷ್ಟು ರಸಗೊಬ್ಬರವನ್ನು ಕಡಿಮೆ ಬೆಲೆಯಲ್ಲಿ ನೀಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಎಂ.ವಿಜಯಕೃಷ್ಣ ಮಾತನಾಡಿ, ‘ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲವು ಕಳೆದ 10 ವರ್ಷಗಳಿಂದ 25 ರಿಂದ 35 ಡಾಲರ್ ಮಧ್ಯೆ ದೊರೆಯುತ್ತಿದೆ. ದೇಶದಲ್ಲಿನ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕಡಿಮೆ ಮಾಡದೆ ಜನರಿಂದ ₹ 27.61 ಲಕ್ಷ ಕೋಟಿಯನ್ನು ಹಗಲು ದರೋಡೆ ಮಾಡಲಾಗುತ್ತಿದೆ. ಅಲ್ಲದೇ ರಿಯಾಯಿತಿ ದರದಲ್ಲಿ ಕಚ್ಚಾ ತೈಲವನ್ನು ಮಾರಾಟ ಮಾಡುತ್ತಿದ್ದ ಇರಾನ್, ರಷ್ಯಾದಿಂದ ಖರೀದಿ ಮಾಡದಂತೆ ಅಮೆರಿಕದ ಬೆದರಿಕೆಗೆ ಮಣಿದು, ದುಬಾರಿ ಬೆಲೆಯಲ್ಲಿ ಅಮೆರಿಕ, ವೆನುಜುವೆಲ ದೇಶಗಳಿಂದ ಖರೀದಿ ಮಾಡಲಾಗುತ್ತಿದೆ. ಇದರಿಂದ ದೇಶದ ಜನತೆಯು ದುಬಾರಿ ಬೆಲೆಯನ್ನು ತೆರಬೇಕಾಗಿದೆ. ಇದಕ್ಕೆ ಪ್ರಧಾನಿ ಮೋದಿ ಅವರ ಅಸಮರ್ಥ ಕಾರ್ಯನಿರ್ವಹಣೆಯೇ ಕಾರಣ’ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಗಾಂಧಿನಗರ ನಾರಾಯಣಸ್ವಾಮಿ, ವಿ.ಗೀತಾ, ಮುಖಂಡರಾದ ಎಂ.ಭೀಮರಾಜ್, ವಿ.ಅಂಬರೀಶ್, ಎಸ್.ಆಶಾ, ಹೊಲ್ಲಂಬಳ್ಳಿ ವೆಂಕಟೇಶಪ್ಪ, ಎ.ಚ್.ಬಿ.ಕೃಷ್ಣಪ್ಪ, ಅಪ್ಪಯ್ಯಣ, ಆಂಜನಮ್ಮ, ಚಿನ್ನಮ್ಮ, ನಾರಾಯಣಪ್ಪ, ಮುನಿರತ್ನಮ್ಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-18-2128109030

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.