ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ಪ್ರಥಮ ಸ್ಥಾನ

Last Updated 9 ಜುಲೈ 2020, 9:15 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಜನರಲ್‌ ಸರ್ಜರಿಯಲ್ಲಿ ರಾಜ್ಯಮಟ್ಟದಲ್ಲಿ 4ನೇ ಸ್ಥಾನ ಪಡೆದಿದೆ. ಇದು ಜಿಲ್ಲಾ ಆರೋಗ್ಯ ಇಲಾಖೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಶಸ್ತ್ರಚಿಕಿತ್ಸಕ ಡಾ.ರಂಗರಾವ್‌ ಹೇಳಿದರು.

ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ಬುಧವಾರ ರೋಟರಿ ಸೆಂಟ್ರಲ್‌ ಶ್ರೀನಿವಾಸಪುರದಿಂದ ವೈದ್ಯರ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಆರೋಗ್ಯ ಇಲಾಖೆ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿದ್ದು, ತಾಲ್ಲೂಕುಮಟ್ಟದ ಆಸ್ಪತ್ರೆಗಳಲ್ಲಿ ಇಲ್ಲಿನ ಆಸ್ಪತ್ರೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಿದರು.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಪ್ರಥಮ, ದಾವಣಗೆರೆ ಜಿಲ್ಲಾ ಆಸ್ಪತ್ರೆ ದ್ವಿತೀಯ, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ತೃತೀಯ ಹಾಗೂ ಸ್ಥಳೀಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ 4ನೇ ಸ್ಥಾನ ಪಡೆದುಕೊಂಡಿದೆ. ಇದು ಒಬ್ಬ ವ್ಯಕ್ತಿಯ ಸಾಧನೆಯಲ್ಲ. ವೈದ್ಯರು ಸೇರಿದಂತೆ ಒಟ್ಟಾರೆ ಸಿಬ್ಬಂದಿಯ ಶ್ರಮದ ಫಲ. ರಾಷ್ಟ್ರ ಮಟ್ಟದಲ್ಲಿ ಉತ್ತಮ ಹೆಸರು ಗಳಿಸುವ ಇಚ್ಛೆ ಇಲ್ಲಿನ ಸಿಬ್ಬಂದಿಯದ್ದಾಗಿದೆ ಎಂದು ಹೇಳಿದರು.

ದಾದಿಯರಾದ ಶಾಂತಾ, ಲಿತಿಯಾ, ಅನಿತಾ ಅವರನ್ನು ಸನ್ಮಾನಿಸಲಾಯಿತು.

ಡಾ.ಗೌಸಿಯಾ ಬಾನು, ಡಾ.ಲಾವಣ್ಯಾ, ಫಾರ್ಮಸಿ ಅಧಿಕಾರಿ ನಾಗರಾಜ್‌, ದಾದಿಯರಾದ ಕವಿತಾ, ಪ್ರಭಾವತಿ ಸುಗುಣ, ಶಕುಂತಲಾ, ಸಿಂಧು, ಚೈತ್ರಾ, ಸೈಯದ್‌, ಶಿವಮೂರ್ತಿ, ನಾಗೇಶ್‌, ಎನ್‌.ಕೃಷ್ಣಮೂರ್ತಿ, ಮಂಜುನಾಥ್‌, ಶಿವಾರೆಡ್ಡಿ, ಶಂಕರ್‌, ಆನಂದ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT