ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಾಣವಾಗಿರುವ ನೂತನ ಪ್ರಯೋಗಾಲಯವನ್ನು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಸರ್ಕಾರಿ ಸಾರ್ವಜನಿಕರ ಆಸ್ಪತ್ರೆಯಲ್ಲಿ ನೂತನ ಪ್ರಯೋಗಾಲಯ ನಿರ್ಮಾಣಕ್ಕೆ 5ನೇ ಯೋಜನೆಯಲ್ಲಿ ₹50 ಲಕ್ಷ ಅನುದಾನ ನೀಡಲಾಗಿದೆ. ಗ್ರಾಮೀಣ ಪ್ರದೇಶದ ಜನತೆಗೆ ಉತ್ತಮ ಆರೋಗ್ಯ ಸೇವೆ ಸಲ್ಲಿಸುವುದು ಸರ್ಕಾರದ ಪ್ರಮುಖ ಉದ್ದೇಶ ಎಂದರು.

ಪ್ರಯೋಗಾಲಯದಲ್ಲಿ ನೂತನ ಯಂತ್ರೋಪಕರಣಗಳನ್ನು ಅಳವಡಿಸಲಾಗಿದ್ದು, ವಿವಿಧ ರೀತಿಯ ರಕ್ತ ಪರೀಕ್ಷೆಗಳನ್ನು ತ್ವರಿತವಾಗಿ ಸೌಲಭ್ಯ ಕಲ್ಪಿಸಲಾಗಿದೆ. ವೈದ್ಯರು ತುರ್ತು ಪರಿಸ್ಥಿತಿಯಲ್ಲಿ ಬೇಗ ಚಿಕಿತ್ಸೆ ನೀಡಲು ಇದು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಆಸ್ಪತ್ರೆ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗ, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-18-811605553

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.