ಶ್ರೀನಿವಾಸಪುರ: ಬಡವರ ಹಸಿವು ನೀಗಿಸಲು ಆರಂಭವಾಗಿರುವ ಪಟ್ಟಣದ ಇಂದಿರಾ ಕ್ಯಾಂಟೀನ್ಗೆ ಸುಮಾರು 9 ತಿಂಗಳಿಂದ ಬೀಗ ಹಾಕಲಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗಿದೆ.

ಕಡಿಮೆ ದರದಲ್ಲಿ ಬೆಳಗಿನ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿ ಊಟ ಸಿಗುತ್ತಿತ್ತು. ಇದರಿಂದ ನೂರಾರು ಮಂದಿ ಹಸಿವು ನೀಗಿಸಿಕೊಳ್ಳುತ್ತಿದ್ದರು. ಆದರೆ, ಕ್ಯಾಂಟೀನ್ ನಿಭಾಯಿಸುವವರು ಯಾರೂ ಇಲ್ಲ ಎಂಬ ಕಾರಣಕ್ಕೆ ಲಕ್ಷಾಂತರ ವೆಚ್ಚದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಕಟ್ಟಡಕ್ಕೆ ಬೀಗ ಹಾಕಲಾಗಿದೆ. ಇದರಿಂದ ಕಟ್ಟಡದ ಸುತ್ತಲೂ ಕಸದ ರಾಶಿ ತುಂಬಿಕೊಂಡಿದೆ. ಜೊತೆಗೆ ವಾಹನಗಳ ಪಾರ್ಕಿಂಗ್ ಹಾಗೂ ಹಣ್ಣಿನ ಅಂಗಡಿಗಳ ಮಾರುಕಟ್ಟೆಯಾಗಿ ನಿರ್ಮಾಣವಾಗಿದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಇಂದಿರಾ ಕ್ಯಾಂಟೀನ್ ತೆರೆದು, ಬಡವರಿಗೆ ಊಟದ ವ್ಯವಸ್ಥೆ ನೀಡಬೇಕಾಗಿ ಸಾರ್ವಜನಿಕರು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-18-2084234851

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.