ಶ್ರೀನಿವಾಸಪುರ: ಮುಸ್ಲಿಂ ಸಮುದಾಯದ ನಾಯಕರಾದ ನಸೀರ್ ಅಹ್ಮದ್ ಹಾಗೂ ಅಬ್ದುಲ್ ಜಬ್ಬಾರ್ ಅವರಿಗೆ ವಾಪಸ್ ಸ್ಥಾನಮಾನ ನೀಡುವವರೆಗೆ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಶ್ರೀನಿವಾಸಪುರದ ಉಲೇಮಾಗಳು ಎಚ್ಚರಿಕೆ ನೀಡಿದರು.

ಪಟ್ಟಣದ ಆಜಾದ್ ರಸ್ತೆಯ ಜಾಮಿಯಾ ಮಸೀದಿ ಸಮೀಪ ಹಮ್ಮಿಕೊಂಡಿದ್ದ ರಾಷ್ಟ್ರೀಯ ಏಕತಾ ಕಾರ್ಯಕ್ರಮದಲ್ಲಿ ಮಾತನಾಡಿದ ಧಾರ್ಮಿಕ ಮುಖಂಡರು, ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಆಗುತ್ತಿರುವ ಅನ್ಯಾಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿದರು.

ಮೌಲ್ವಿ ಕಲೀಮ್ ಉಲ್ಲಾ ಮಾತನಾಡಿ, ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶದಾದ್ಯಂತ ನಡೆಸಿದ ಭಾರತ ಜೋಡೋ ಯಾತ್ರೆ ಮೂಲಕ ಏಕತೆ, ಸೌಹಾರ್ದ ಮತ್ತು ಸಹೋದರತ್ವದ ಸಂದೇಶ ಸಾರಿದ್ದಾರೆ. ನಫ್ರತ್ ಕೆ ಬಜಾರ್ ಮೇ ಮೊಹಬ್ಬತ್ ಕೀ ದುಕಾನ್ ಎಂಬ ಘೋಷಣೆಯೊಂದಿಗೆ ದೇಶದ ವಿವಿಧ ಭಾಗಗಳಲ್ಲಿ ಜನರನ್ನು ಒಂದಾಗಿಸಲು ಮಾಡಿದ ಪ್ರಯತ್ನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಆದರೆ, ರಾಜ್ಯದಲ್ಲಿ ಅಲ್ಪಸಂಖ್ಯಾತ ನಾಯಕರಿಗೆ ಅನ್ಯಾಯವಾಗುತ್ತಿರುವುದು ವಿಷಾದನೀಯ’ ಎಂದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರು, ವಿಶೇಷವಾಗಿ ಮುಸ್ಲಿಂ ಸಮುದಾಯದ ಮತಗಳು ಕಾಂಗ್ರೆಸ್ ಪಕ್ಷದ ಪರ ಹರಿದು ಬಂದ ಪರಿಣಾಮವೇ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂಬುದನ್ನು ರಾಜ್ಯ ನಾಯಕರು ಮರೆಯಬಾರದು ಎಂದು ಎಚ್ಚರಿಸಿದರು.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರ ಸಂಖ್ಯೆಯನ್ನು ಗಮನಿಸಿ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ನಾಯಕರು ಟಿಕೆಟ್ ಕೇಳಿರುವುದು ಅವರ ಹಕ್ಕು. ಆದರೆ, ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿರುವುದು ಹಾಗೂ ಹಿರಿಯ ನಾಯಕ ನಸೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಿರುವುದು ಸಮಂಜಸವಲ್ಲ ಎಂದರು.

ಈ ವೇಳೆ ಹಲವು ಉಲೇಮಾಗಳು ಮಾತನಾಡಿ ಅಲ್ಪಸಂಖ್ಯಾತರ ಹಕ್ಕುಗಳಿಗಾಗಿ ಸಂಘಟಿತ ಹೋರಾಟ ಅನಿವಾರ್ಯವಾಗಿದೆ ಎಂದು ಕರೆ ನೀಡಿದರು.

ಜಾಮಿಯಾ ಮಸೀದಿ ಮುತ್ತುವಲ್ಲಿ ಜಾಹಿದ್ ಅನ್ಸಾರಿ ಕೂಡ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಜಾಮಿಯಾ ಮಸೀದಿಯ ಇಮಾಮ್ ಸೇರಿದಂತೆ ಪಟ್ಟಣದ ವಿವಿಧ ಮಸೀದಿಗಳ ಉಲೇಮಾಗಳು ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-18-674814039

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.