ಶ್ರೀನಿವಾಸಪುರ: ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆ ಹಾಗೂ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಿದ್ದ ಶಿಕ್ಷಕರಿಗೆ ಗಳಿಕೆ ರಜೆ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಮುನಿಲಕ್ಷ್ಮಯ್ಯ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಸಂಘದ ಪದಾಧಿಕಾರಿಗಳು, ‘ಸರ್ಕಾರದ ಮಹತ್ವಾಕಾಂಕ್ಷಿ ಸಮೀಕ್ಷಾ ಕಾರ್ಯಗಳಿಗಾಗಿ ಸಾವಿರಾರು ಶಿಕ್ಷಕರು ಹಾಗೂ ಸರ್ಕಾರಿ ನೌಕರರು ಹಗಲಿರುಳು ಶ್ರಮಿಸಿದ್ದಾರೆ. ತಮ್ಮ ನಿತ್ಯದ ಕರ್ತವ್ಯದ ಜೊತೆಗೆ ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಹೆಚ್ಚುವರಿ ಕೆಲಸ ನಿರ್ವಹಿಸಿದ್ದಾರೆ. ಇವರ ಸೇವೆ ಪರಿಗಣಿಸಿ ಸರ್ಕಾರ ಗಳಿಕೆ ರಜೆ ನೀಡಬೇಕೆಂದು ಒತ್ತಾಯಿಸಿದರು.

ಈ ವೇಳೆ ಆರ್.ಎಸ್.ರೆಡ್ಡಪ್ಪ, ಸಿ.ವಿ.ವೇಣುಗೋಪಾಲ್, ಎನ್.ವಿ.ಮಂಜುನಾಥ ರೆಡ್ಡಿ ಸೇರಿದಂತೆ ಸಂಘದ ಇತರ ಪದಾಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-18-42715770

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.