ಶ್ರೀನಿವಾಸಪುರ: ತಾಲ್ಲೂಕಿನ ಅಡ್ಡಗಲ್ ಬಳಿ ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಅವರ ತೋಟದಲ್ಲಿ ಕೆಲಸಕ್ಕಿದ್ದ ಮಹಿಳೆಯೊಬ್ಬರು ಮೇವು ಕಟಾವು ಯಂತ್ರಕ್ಕೆ ಸಿಲುಕಿ ಶುಕ್ರವಾರ ಮೃತಪಟ್ಟಿದ್ದಾರೆ.

ಕೊಪ್ಪವಾರಪಲ್ಲಿ ಗ್ರಾಮದ ವೀರನಾರಾಯಣಸ್ವಾಮಿ ಎಂಬುವರ ಪತ್ನಿ ಮಂಗಮ್ಮ (46) ಮೃತ ಮಹಿಳೆ. ತೋಟದಲ್ಲಿ ದನ ಕರುಗಳಿಗೆ ಮೇವು ಕತ್ತರಿಸುವ ಕೆಲಸದಲ್ಲಿ ತೊಡಗಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕೆಲ ವರ್ಷಗಳಿಂದ ಅವರು ಈ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ.

ಸ್ಥಳಕ್ಕೆ ಮುಳಬಾಗಿಲು ವಿಭಾಗದ ಡಿವೈಎಸ್ಪಿ ನಂದಕುಮಾರ್ ಹಾಗೂ ಗೌನಿಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೌನಿಪಲ್ಲಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.