ಶ್ರೀನಿವಾಸಪುರ: ತಾಲ್ಲೂಕಿನ ಪಣಸಮಾಕಲಹಳ್ಳಿ ಬಳಿ ರಾತ್ರಿ ಗಸ್ತು ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೆಬಲ್ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.

ಆನಂದ್ ಬಾಬು (45) ಮೃತರು. ಒಂದೂವರೆ ವರ್ಷದಿಂದ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಅವರು ಹೆಡ್ ಕಾನ್ಸ್ಟೆಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ತಮ್ಮ ದ್ವಿಚಕ್ರ ವಾಹನದಲ್ಲಿ ರಾತ್ರಿ ಗಸ್ತು ನಡೆಸುತ್ತಿದ್ದರು.

ಈ ವೇಳೆ ಅತಿ ವೇಗವಾಗಿ ಬಂದ ಬೊಲೆರೋ ವಾಹನವೊಂದು ಇವರಿದ್ದ ದ್ವಿಚಕ್ರ ವಾಹನಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೊಲೆರೋ ವಾಹನವು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ, ಪಕ್ಕದ ಹಳ್ಳಕ್ಕೆ ಬಿದ್ದಿದೆ. ಅಪಘಾತದ ತೀವ್ರತೆಗೆ ಆನಂದ್ ಬಾಬು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ವಾಹನ ಮತ್ತು ಚಾಲಕನ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಇಲಾಖೆಯ ಸಹೋದ್ಯೋಗಿಗಳು ಮತ್ತು ಕುಟುಂಬಸ್ಥರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.