ಬುಧವಾರ, ಮೇ 18, 2022
23 °C

ಕೋಲಾರ: ಜಿಲ್ಲಾ ಕೇಂದ್ರದಲ್ಲಿ ಶ್ರೀರಾಮೋತ್ಸವ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಶ್ರೀರಾಮನವಮಿ ಪ್ರಯುಕ್ತ ಸಂಘಟನೆಯಿಂದ ನಗರದ ಗಾಂಧಿವನದಲ್ಲಿ ಏ. 8ರಿಂದ ಏ. 10ರವರೆಗೆ ಶ್ರೀರಾಮೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶುಕ್ರವಾರ (‌ಏ.8) ಸಂಜೆ 6 ಗಂಟೆಗೆ ಗಾಂಧಿವನದಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ಹಾಗೂ ಪ್ರಸಾದ ವಿನಿಯೋಗವಿರುತ್ತದೆ. ಶನಿವಾರ (ಏ.9) ಸಂಜೆ 7 ಗಂಟೆಗೆ ಪೂಜೆ, ಪ್ರಸಾದ ವಿನಿಯೋಗ ನಡೆಯಲಿದೆ. ಭಾನುವಾರ (ಏ.10) ಮಧ್ಯಾಹ್ನ 3 ಗಂಟೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಶೋಭಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು
ಹೇಳಿದ್ದಾರೆ.

ಎಂ.ಜಿ. ರಸ್ತೆಯಿಂದ ಆರಂಭವಾಗುವ ಶೋಭಾ ಯಾತ್ರೆ ಸಂಜೆ 6ಕ್ಕೆ ಡೂಂಲೈಟ್ ವೃತ್ತದಲ್ಲಿನ ವಿನಾಯಕ ದೇವಾಲಯದ ಬಳಿ ಅಂತ್ಯಗೊಳ್ಳುತ್ತದೆ. ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ. ವಿದ್ಯಾ ಮಹಾ ಸಂಸ್ಥಾನದ ಸಂಸ್ಥಾಪಕರಾದ ಸಾಧ್ವಿ ಯೋಗಿನಿ ಕಾರ್ಯಕ್ರಮ ಉದ್ಘಾಟಿಸುತ್ತಾರೆ. ಸಂಸದ ಎಸ್‌. ಮುನಿಸ್ವಾಮಿ ಅಧ್ಯಕ್ಷತೆ ವಹಿಸುತ್ತಾರೆ.

ನಾಗಲಾಪುರ ತೇಜೇಶಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸುತ್ತಾರೆ. ಶ್ರೀರಾಮಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಆಡ್ಯಾರ್, ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಚಂದ್ರಶೇಖರ್, ವಕೀಲ ಕೆ.ವಿ. ಶಂಕರಪ್ಪ ಅತಿಥಿಗಳಾಗಿ ಭಾಗವಹಿಸುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.