ಕೋಲಾರ: ಜಿಲ್ಲೆಯ ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಪ್ರವೇಶಪತ್ರಗಳನ್ನು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ಸೈಟ್ನಲ್ಲಿ ಡೌನ್ಲೋಡ್ ಮಾಡಿ ತಪ್ಪುಗಳಿದ್ದರೆ ಸರಿಪಡಿಸಿ ಮೇ 15ರೊಳಗೆ ಕಳುಹಿಸಬೇಕು ಎಂದು ಎಸ್ಸೆಸ್ಸೆಲ್ಸಿ ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರೀಕ್ಷಾ ಪ್ರವೇಶಪತ್ರದಲ್ಲಿ ತಪ್ಪುಗಳಿದ್ದರೆ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಪ್ರೌಢ ಶಾಲೆಗಳ ಮುಖ್ಯಸ್ಥರು ಶೀಘ್ರವೇ ಎಸ್ಸೆಸ್ಸೆಲ್ಸಿ ಪರೀಕ್ಷಾ ಪ್ರವೇಶಪತ್ರ ಡೌನ್ಲೋಡ್ ಮಾಡಬೇಕು ಎಂದು ಹೇಳಿದ್ದಾರೆ.

ವಿದ್ಯಾರ್ಥಿಯ ಹೆಸರು, ತಂದೆ ಮತ್ತು ತಾಯಿಯ ಹೆಸರು, ಹುಟ್ಟಿದ ದಿನಾಂಕ, ಪರೀಕ್ಷೆಗೆ ತೆಗೆದುಕೊಂಡಿರುವ ವಿಷಯಗಳು, ಭಾಷೆ, ಸಹಿ, ಭಾವಚಿತ್ರ ಮತ್ತಿತರ 8 ಅಂಶಗಳಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಪ್ರವೇಶಪತ್ರದಲ್ಲಿ ಬದಲಾವಣೆಗಳಿದ್ದರೆ ಕೂಡಲೇ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿನ ಜಿಲ್ಲೆಯ ಶಾಖಾಧಿಕಾರಿಗಳಿಗೆ ಲಿಖಿತವಾಗಿ ಮನವಿ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.